ಪ್ರವಾದಿ ಹೇಳಿಕೆ ವಿವಾದ: ಜಾರ್ಖಂಡ್‌ನ ರಾಂಚಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರ ಸಾವು

ರಾಂಚಿ: ಇಬ್ಬರು ಅಮಾನತುಗೊಂಡಿರುವ ಬಿಜೆಪಿ ವಕ್ತಾರರು ಪ್ರವಾದಿ ಮೊಹಮ್ಮದ್ ಕುರಿತು ಮಾಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಂಚಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಯಾವುದೇ ಪರಿಸ್ಥಿತಿಯನ್ನು ನಿಯಂತ್ರಿಸಲು ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಸುಖದೇವ್ ನಗರ, ಲೋವರ್ ಬಜಾರ್, ಡೈಲಿ ಮಾರ್ಕೆಟ್ ಮತ್ತು ಹಿಂದ್ಪಿಡಿ ಸೇರಿದಂತೆ 10 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರ ರಾಜ್ಯ ರಾಜಧಾನಿಯನ್ನು ಬೆಚ್ಚಿಬೀಳಿಸಿದ ಘರ್ಷಣೆಯಲ್ಲಿ ಸುಮಾರು ಎರಡು ಡಜನ್ ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತೀವ್ರವಾಗಿ ಗಾಯಗೊಂಡ 13 ಜನರನ್ನು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS)ಗೆ ದಾಖಲಿಸಲಾಗಿದೆ.ಅವರಲ್ಲಿ ಇಬ್ಬರು ನಿನ್ನೆ ತಡರಾತ್ರಿ ಮೃತಪಟ್ಟಿದ್ದಾನೆ. ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರಲ್ಲಿ CRPF ಸಿಬ್ಬಂದಿ ಮತ್ತು ಪೊಲೀಸರು ಸೇರಿದ್ದಾರೆ” ಎಂದು RIMS ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

ರಾಂಚಿಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಸುರೇಂದ್ರಕುಮಾರ್ ಝಾ ಅವರು ತಲೆಗೆ ಗಾಯವಾಗಿ ಮೆಡಿಕಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಲ್ಲು ತೂರಾಟದಿಂದ ತಲೆಯ ಜೊತೆಗೆ ದೇಹದ ಇತರ ಭಾಗಗಳಿಗೂ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.
ಕೆಲವು ಹಿಂದುತ್ವ ಸಂಘಟನೆಗಳು ಶನಿವಾರ ರಾಂಚಿ ಬಂದ್‌ಗೆ ಕರೆ ನೀಡಿದ್ದು, ಹಿಂಸಾಚಾರದ ವಿರುದ್ಧ ಪ್ರತಿಭಟಿಸಿ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಕೇಳಿಕೊಂಡಿದ್ದಾರೆ. ಹಿಂಸಾಚಾರವನ್ನು ಖಂಡಿಸಿರುವ ರಾಜ್ಯಪಾಲ ರಮೇಶ್ ಬೈಸ್ ಅವರು ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ಬಂಧಿಸುವಂತೆ ಹಿಂಸಾತ್ಮಕ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement