ಮಂಗಳೂರು: ಕೊಲೆ ಆರೋಪಿಗಳ ಕಾಲಿಗೆ ಪೊಲೀಸರಿಂದ ಗುಂಡೇಟು

posted in: ರಾಜ್ಯ | 0

ಮಂಗಳೂರು: ರೌಡಿ ಶೀಟರ್ ರಾಜಾ ಅಲಿಯಾಸ್ ರಾಘವೇಂದ್ರ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.
ರಾಜಾ ಕೊಲೆ ಆರೋಪಿಗಳಾದ ಅರ್ಜುನ ಮೂಡುಶೆಡ್ಡೆ ಮತ್ತು ಮನೋಜ ಅವರನ್ನು ಬಂಧಿಸಲು ಠಾಣಾ ವ್ಯಾಪ್ತಿಯ ಗ್ಲೋಬಲ್ ಹೆರಿಟೇಜ್ ಲೇಔಟ್ ಬಳಿ ತೆರಳಿದಾಗ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ, ಈ ಸಂದರ್ಭದಲ್ಲಿ ಆತ್ಮರಕ್ಷಣೆಗೆ ಪೊಲೀಸರು ಇಬ್ಬರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ.

advertisement

ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ರಾಘವೇಂದ್ರ ಕೊಲೆ ಪ್ರಕರಣದ ಸಂಬಂಧ ಇನ್ನಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮೂರು ಸುತ್ತು ಫೈರಿಂಗ್ ಮಾಡಿದ್ದಾರೆ. ಮೊದಲು ಗಾಳಿಯಲ್ಲಿ ಒಂದು ಸುತ್ತು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಎಚ್ಚರಿಕೆಯನ್ನು ಲೆಕ್ಕಿಸಿದರೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಇಬರಬು ಆರೋಪಿಗಳ ಕಾಲಿಗೆ ನಂತರ ಗುಂಡು ಹಾರಿಸಲಾಗಿದೆ. ಆರೋಪಿಗಳ ಕಾಲಿಗೆ ಎರಡು ಗುಂಡೇಟು ಬಿದ್ದಿದೆ.
ಘಟನೆಯಲ್ಲಿ ಮೂವರು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದು, ಪಿಎಸ್‌ಐ ನಾಗೇಂದ್ರ, ಎಎಚ್‌ಸಿ ಸಂತೋಷ್ ಪೂಜಾರಿ ಮತ್ತು ಎಎಸ್‌ಐ ಡೇವಿಡ್ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಗೊಂಡ ಪೊಲೀಸರು ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಕೊಪ್ಪಳ ಜಿಲ್ಲೆಯಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ: ಇಬ್ಬರ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement