ಪ್ರವಾದಿ ಹೇಳಿಕೆ ವಿವಾದ: ಜಾರ್ಖಂಡ್‌ನ ರಾಂಚಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರ ಸಾವು

ರಾಂಚಿ: ಇಬ್ಬರು ಅಮಾನತುಗೊಂಡಿರುವ ಬಿಜೆಪಿ ವಕ್ತಾರರು ಪ್ರವಾದಿ ಮೊಹಮ್ಮದ್ ಕುರಿತು ಮಾಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಂಚಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಯಾವುದೇ ಪರಿಸ್ಥಿತಿಯನ್ನು ನಿಯಂತ್ರಿಸಲು ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಸುಖದೇವ್ … Continued

ಭಾರತದಲ್ಲಿ ಏರುತ್ತಿದೆ ಕೊರೊನಾ ಪ್ರಕರಣ… ಕಳೆದ 24 ಗಂಟೆಗಳಲ್ಲಿ 8,329 ಹೊಸ ಪ್ರಕರಣಗಳು ದಾಖಲು. ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,329 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದಾಗಿ 10 ಸಾವುಗಳು ಸಂಭವಿಸಿವೆ. ಭಾರತದಲ್ಲಿ ಕೋವಿಡ್‌-19 ನ ಒಟ್ಟು ಸಕ್ರಿಯ ಪ್ರಕರಣಗಳು 40,370 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಇಂದು ತೋರಿಸಿವೆ. ನಿನ್ನೆ 36,267 ಸಕ್ರಿಯ ಪ್ರಕರಣಗಳು ದಾಖಲಾಗಿತ್ತು. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೋವಿಡ್‌-19 … Continued

ರಾಜ್ಯಸಭಾ ಚುನಾವಣೆ: ಮಹಾರಾಷ್ಟ್ರದಲ್ಲಿ 3 ಸ್ಥಾನಗಳನ್ನು ಗೆದ್ದು ಆಡಳಿತಾರೂಢ ಎಂವಿಎ ಮೈತ್ರಿಕೂಟಕ್ಕೆ ಆಘಾತ ನೀಡಿದ ಬಿಜೆಪಿ, ಹತ್ಯಾಣದಲ್ಲಿ ಕಾಂಗ್ರೆಸ್‌ಗೆ ಶಾಕ್‌…!

ನವದೆಹಲಿ: ಕ್ರಾಸ್ ವೋಟಿಂಗ್, ನಿಯಮ ಉಲ್ಲಂಘನೆ, ಆರೋಪ-ಪ್ರತ್ಯಾರೋಪಗಳಿಂದಾಗಿ ಗಂಟೆಗಟ್ಟಲೆ ಮತ ಎಣಿಕೆ ನಂತರ, ತೀವ್ರ ಹೋರಾಟದ ರಾಜ್ಯಸಭಾ ಚುನಾವಣೆಯ ಫಲಿತಾಂಶವನ್ನು ಶನಿವಾರ ನಸುಕಿನಲ್ಲಿ ಪ್ರಕಟಿಸಲಾಯಿತು. ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣ ಮತ್ತು ಕರ್ನಾಟಕ ಈ ನಾಲ್ಕು ರಾಜ್ಯಗಳ 16 ಸ್ಥಾನಗಳಲ್ಲಿ ಬಿಜೆಪಿ ಎಂಟನ್ನು ಗೆದ್ದು ಸಂಸತ್ತಿನ ಮೇಲ್ಮನೆಯಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿತು. ಸಾಂಪ್ರದಾಯಿಕ ಎದುರಾಳಿ ಕಾಂಗ್ರೆಸ್ ಐದು … Continued

ವೈದ್ಯರ ಸಲಹೆ ಮೇರೆಗೆ ಒಂದು ವಾರ ಎಚ್‌ಡಿಕೆ ವಿಶ್ರಾಂತಿ, ಸಾರ್ವಜನಿಕ ಭೇಟಿ ಇಲ್ಲ

ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಂದು ವಾರ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ. ಈ ಬಗ್ಗೆ ಶುಕ್ರವಾರ ಸಂಜೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕನಿಷ್ಠ ಒಂದು ವಾರವಾದರೂ ಯಾರನ್ನೂ ಭೇಟಿ ಮಾಡುವುದು ಅಥವಾ ಹೆಚ್ಚು ಮಾತನಾಡ ಬಾರದು ಎಂದು ವೈದ್ಯರು ಸಲಹೆ ಮಾಡಿದ್ದಾರೆ. ಹೀಗಾಗಿ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ … Continued

ಪ್ರವಾದಿ ಇಂದು ಬದುಕಿದ್ದರೆ…: ಪ್ರತಿಭಟನೆ ಭುಗಿಲೇಳುತ್ತಿದ್ದಂತೆ ತಸ್ಲೀಂ ನಸ್ರೀನ್ ಹೇಳಿಕೆ

ನವದೆಹಲಿ: ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ಅವರು ಪ್ರವಾದಿ ಮುಹಮ್ಮದ್ ಕುರಿತು ಭಾರತೀಯ ಜನತಾ ಪಕ್ಷದ ಅಮಾನತುಗೊಂಡಿರುವ ವಕ್ತಾರರಾದ ನೂಪುರ್ ಶರ್ಮಾ ಹೇಳಿಕೆಗಳ ಕುರಿತು ನಡೆಯುತ್ತಿರುವ ಪ್ರತಿಭಟನೆಯನ್ನು ಖಂಡಿಸಿದ್ದಾರೆ. ಟ್ವಿಟರ್‌ನಲ್ಲಿ ತಸ್ಲೀಮಾ ನಸ್ರೀನ್ ಪ್ರವಾದಿ ಮುಹಮ್ಮದ್ ಕುರಿತಾದ ಹೇಳಿಕೆಗಳ ಬಗ್ಗೆ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಪ್ರವಾದಿ ಮುಹಮ್ಮದ್ … Continued