ಅಡ್ಡ ಮತದಾನ ಮಾಡಿದ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್​

ನವದೆಹಲಿ: ರಾಜ್ಯಸಭೆಗೆ ನಡೆದ ಈ ಸಲದ ಚುನಾವಣೆಯಲ್ಲಿ ಕೆಲವೆಡೆ ಅಡ್ಡ ಮತದಾನದ ಚಲಾವಣೆ ಆಗಿದ್ದು, ಕಾಂಗ್ರೆಸ್​ ಅಡ್ಡ ಮತದಾನ ಮಾಡಿದ ಕಾರಣಕ್ಕೆ ಹರಿಯಾಣದ ಅದಂಪುರ ಕ್ಷೇತ್ರದ ಶಾಸಕ ಕುಲದೀಪ್ ಬಿಷ್ಣೊಯ್​ ಅವರನ್ನು ಉಚ್ಚಾಟನೆ ಮಾಡಿದೆ.
ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸೇರಿದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಸ್ಥಾನಗಳಿಂದಲೂ ಉಚ್ಚಾಟನೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

advertisement

ಹರಿಯಾಣದಲ್ಲಿ ರಾಜ್ಯಸಭೆಯ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಕೃಷ್ಣ ಪನ್ವಾರ್ ಜಯ ಗಳಿಸಿದ್ದರು. ಈ ಕುರಿತು ಮಾಹಿತಿ ನೀಡುವಾಗ ಅಲ್ಲಿನ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್ ಅಡ್ಡ ಮತದಾನದ ಕುರಿತು ಪ್ರಸ್ತಾಪಿಸಿದ್ದರು. ಕುಲದೀಪ್ ಆತ್ಮಸಾಕ್ಷಿ ಪ್ರಕಾರ ಬಿಜೆಪಿಗೆ ಮತ ಚಲಾಯಿಸಿದ್ದು, ಕಾಂಗ್ರೆಸ್​ನ ಅಜಯ್ ಮಾಕೆನ್ ಅವರಿಗೆ ವೋಟ್ ಮಾಡಿರಲಿಲ್ಲ ಎಂದು ಖಟ್ಟರ್ ಬಹಿರಂಗಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕುಲದೀಪ್ ಪಕ್ಷದಿಂದ ಉಚ್ಚಾಟನೆಗೊಂಡಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಸಚಿವರ ಒತ್ತಡದಿಂದ ಕೊಳಕು ಹಾಸಿಗೆ ಮೇಲೆ ಮಲಗಿ ಅಪಮಾನಕ್ಕೊಳಗಾದ ಕುಲಪತಿ ರಾಜೀನಾಮೆ

ನಿಮ್ಮ ಕಾಮೆಂಟ್ ಬರೆಯಿರಿ

advertisement