ಪರಿಷತ್‌ನ ಪದವಿಧರ-ಶಿಕ್ಷಕರ ಕ್ಷೇತ್ರದ ಚುನಾವಣೆ: ರಾಜ್ಯದ ಹಲವು ಜಿಲ್ಲೆಗಳ ಶಾಲಾ-ಕಾಲೇಜು, ಬ್ಯಾಂಕ್​, ಸರ್ಕಾರಿ ಕಚೇರಿಗಳಿಗೆ ನಾಳೆ ವಿಶೇಷ ಸಾಂದರ್ಭಿಕ ರಜೆ

posted in: ರಾಜ್ಯ | 0

ಬೆಂಗಳೂರು: ಜೂನ್ 13 ಸೋಮವಾದಂದು ರಾಜ್ಯ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು. ಶಿಕ್ಷಕರು ಮತ್ತು ಪಧವೀಧರರು ಮತದಾನವನ್ನು ಮಾಡುವ ಸಲುವಾಗಿ ಅರ್ಹ ಮತದಾರರಿಗೆ ಸೀಮಿತವಾಗುವಂತೆ ಚುನಾವಣೆ ನಡೆಯುವ ರಾಜ್ಯದ ಜಿಲ್ಲೆಗಳಲ್ಲಿ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ.
ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರದ ಸರ್ಕಾರಿ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯಾವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ  ಅಂತಹ ಅರ್ಹ ಮತದಾರರಿಗೆ ಸೀಮಿತವಾಗುವಂತೆ  ಮತ ಚಲಾಯಿಸಲಿರುವ ಮತದಾರರಿಗೆ ಸೋಮವಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

advertisement
ಓದಿರಿ :-   ಬೆಳಗಾವಿ ನಂತರ ಈಗ ಮೂಡಲಗಿಯ ಧರ್ಮಟ್ಟಿಯಲ್ಲೂ ಚಿರತೆ ಪ್ರತ್ಯಕ್ಷ

ಚುನಾವಣೆ ನಡೆಯಲಿರುವ ಜಿಲ್ಲೆಗಳು..
ವಾಯವ್ಯ ಕ್ಷೇತ್ರ ಶಿಕ್ಷಕರ ಕ್ಷೇತ್ರ- ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು, ಪಶ್ಚಿಮ ಕ್ಷೇತ್ರ ಶಿಕ್ಷಕರ ಕ್ಷೇತ್ರ- ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು,ದಕ್ಷಿಣ ಪದವೀಧರರ ಕ್ಷೇತ್ರ – ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು, ಹಾಗೂ ವಾಯವ್ಯ ಪದವೀಧರರ ಕ್ಷೇತ್ರ – ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ.
ರಾಜ್ಯದ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ , ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ , ಬೆಳಗಾವಿ ಜಿಲ್ಲೆಗಳಲ್ಲಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನದ ಅನೂಕೂಲಕ್ಕಾಗಿ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement