ಬೆಳಗಾವಿ: ಬಿಜೆಪಿಯ ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ್ದ ಮೂವರ ಬಂಧನ

ಬೆಳಗಾವಿ: ಪ್ರವಾದ ಮೊಹಮ್ಮದ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಅವರ ಪ್ರತಿಕೃತಿಯನ್ನು ಗಲ್ಲಿಗೇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಪ್ರಕರಣದ ಮೂವರು ಆರೋಪಿಗಳಾದ ಮೊಹಮ್ಮದ್ ಶೋಯಬ್, ಅಮನ್ ಮೊಕಾಶಿ, ಅರ್ಬಾಜ್ ಮೊಕಾಶಿ ಅವರನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ ಮುಸ್ಲೀಂ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ನೂಪುರ್ ಶರ್ಮಾ ಪ್ರತಿಕೃತಿಗೆ ಸೀರೆ ಉಡಿಸಿ, ಭಾವಜಿತ್ರವನ್ನು ಅಂಟಿಸಿ ಅದನ್ನು ಬೆಳಗಾವಿಯ ಪೋರ್ಟ್ ರಸ್ತೆಯಲ್ಲಿ ಗಲ್ಲಿಗೇರಿಸಿದ್ದರು. ಿದನ್ನು ವಿವಿಧ ಸಂಘ-ಸಂಸ್ಥೆಗಳು ಸೇರಿದಂತೆ ಹಲವರು ಖಂಡಿಸಿದ್ದರು.
ಮಾರ್ಕೆಟ್ ಠಾಣಾ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಈಗ ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement