ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ ನಂತರ ಹಿಂಸಾಚಾರ: ಉತ್ತರ ಪ್ರದೇಶದ ಎರಡು ನಗರಗಳಲ್ಲಿ ದುಷ್ಕರ್ಮಿಗಳ ವಿರುದ್ಧ ಬುಲ್ಡೋಜರ್ ಕಾರ್ಯಾಚರಣೆ

ಸಹರಾನ್‌ಪುರ (ಉತ್ತರ ಪ್ರದೇಶ): ಈಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರರಾಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗಳನ್ನು ಖಂಡಿಸಿ ನಡೆದ ಹಿಂಸಾಚಾರದ ನಂತರ, ಉತ್ತರ ಪ್ರದೇಶದ ಸಹರಾನ್‌ಪುರದ ಪೊಲೀಸರು ಭಾರಿ ಪೊಲೀಸ್ ಉಪಸ್ಥಿತಿಯಲ್ಲಿ ಬುಲ್ಡೋಜರ್‌ಗಳೊಂದಿಗೆ ಎರಡು ಮನೆಗಳನ್ನು ಧ್ವಂಸಗೊಳಿಸಿದ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಶಾಂತಿ ಮತ್ತು ಸಾಮಾಜಿಕ ಸೌಹಾರ್ದತೆಗೆ ಭಂಗ ತಂದ ಆರೋಪಿಗಳನ್ನು … Continued

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯ ತಂತ್ರಜ್ಞಾನದ ರಾಯಭಾರಿಯಾಗಿ ಭಾರತದ ಅಮನ್ ದೀಪ್ ಗಿಲ್‌ ನೇಮಕ

ನ್ಯೂಯಾರ್ಕ್​: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ತಂತ್ರಜ್ಞಾನದ ರಾಯಭಾರಿಯಾಗಿ ಅಮನ್ ದೀಪ್ ಸಿಂಗ್ ಗಿಲ್ ಅವರನ್ನು ನೇಮಿಸಲಾಗಿದೆ. ಭಾರತೀಯ ರಾಜತಾಂತ್ರಿಕ ಹಿರಿಯ ಅಧಿಕಾರಿಯಾಗಿರುವ ಅಮನ್​ ದೀಪ್​ ಅವರಿಗೆ ಈ ಸ್ಥಾನ ನೀಡಲಾಗಿದೆ. ಭಾರತದ ರಾಯಭಾರಿಯಾಗಿದ್ದ ಗಿಲ್, 2016 ರಿಂದ 2018ರವರೆಗೆ ಜಿನಿವಾದಲ್ಲಿನ ನಿಶಸ್ತ್ರೀಕರಣ ಸಮ್ಮೇಳನದ ಶಾಶ್ವತ ಪ್ರತಿನಿಧಿಯಾಗಿದ್ದರು. ಸದ್ಯ ಆಂಟೋನಿಯೊ ಗುಟೆರೆಸ್ ತಂತ್ರಜ್ಞಾನ … Continued

ಅಡ್ಡ ಮತದಾನ ಮಾಡಿದ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್​

ನವದೆಹಲಿ: ರಾಜ್ಯಸಭೆಗೆ ನಡೆದ ಈ ಸಲದ ಚುನಾವಣೆಯಲ್ಲಿ ಕೆಲವೆಡೆ ಅಡ್ಡ ಮತದಾನದ ಚಲಾವಣೆ ಆಗಿದ್ದು, ಕಾಂಗ್ರೆಸ್​ ಅಡ್ಡ ಮತದಾನ ಮಾಡಿದ ಕಾರಣಕ್ಕೆ ಹರಿಯಾಣದ ಅದಂಪುರ ಕ್ಷೇತ್ರದ ಶಾಸಕ ಕುಲದೀಪ್ ಬಿಷ್ಣೊಯ್​ ಅವರನ್ನು ಉಚ್ಚಾಟನೆ ಮಾಡಿದೆ. ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸೇರಿದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಸ್ಥಾನಗಳಿಂದಲೂ ಉಚ್ಚಾಟನೆ ಮಾಡಲಾಗಿದೆ ಎಂದು … Continued