ಆತ್ಮಕಥನದಲ್ಲಿ ಸಿದ್ದು ವಿರುದ್ಧ ಮೋಟಮ್ಮ ಅಸಮಾಧಾನಕ್ಕೆ ದಲಿತ ವಿರೋಧಿ ಸಿದ್ದರಾಮಯ್ಯ ಎಂದು ಟೀಕಿಸಿದ ಬಿಜೆಪಿ

ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ಮೋಟಮ್ಮ ಅವರ ‘ಬಿದಿರು ನೀನ್ಯಾರಿಗಲ್ಲದವಳು’ ಆತ್ಮಕಥನದಲ್ಲಿ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ತಮ್ಮದೇ ಪಕ್ಷದ ಹಲವರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
‘ಬಿಸಿಲುಗುದುರೆ ಬೆನ್ನೇರಿ’ ಎಂಬ ಭಾಗದಲ್ಲಿ ಸಿದ್ದರಾಮಯ್ಯ ಬಗ್ಗೆ ಅಸಮಾಧಾನ ಹೊರಹಾಕಿರುವ ಮೋಟಮ್ಮ ಅವರು, ”ನನ್ನನ್ನು ಮಂತ್ರಿ ಮಾಡಬಹುದಿತ್ತು ಆದರೆ ಮಾಡಲಿಲ್ಲ, ಸಭಾಧ್ಯಕ್ಷೆ ಆಗುವ ಅವಕಾಶ ಕೂಡಾ ಇತ್ತು, ಅದಕ್ಕೂ ಅವಕಾಶ ನೀಡಲಿಲ್ಲ. ಇದರ ಬಗ್ಗೆ ನನಗೆ ಇಂದಿಗೂ ಬೇಸರ ಇದೆ” ಎಂದು ಬರೆದುಕೊಂಡಿದ್ದಾರೆ ಎನ್ನಲಾಗಿದ್ದು, ಈ ವಿಚಾರ ಮುಂದಿಟ್ಟು ಬಿಜೆಪಿಯು ಸರಣಿ ಟ್ವೀಟ್ ಮೂಲಕ್ಕೆ ಸಿದ್ದರಾಮಯ್ಯ ಅವರನ್ನು ಟೀಕಿಸಿದೆ. ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷರು ಸಿದ್ದರಾಮಯ್ಯ ಬಗ್ಗೆ ಮಾಡಿದ ವ್ಯಾಖ್ಯಾನಕ್ಕೆ ಮೋಟಮ್ಮ ಆತ್ಮಕಥನ ಇನ್ನಷ್ಟು ಪುಷ್ಠಿ ಒದಗಿಸಿದೆ. ಅಧಿಕಾರಕ್ಕಾಗಿ ನಾನೇ ದಲಿತ ಎಂದವರು, ರಾಜಕೀಯದುದ್ದಕ್ಕೂ ಮಾಡಿದ್ದು ದಲಿತ ದ್ರೋಹ ಎಂದು ಬಿಜೆಪಿ ಕರ್ನಾಟಕ ಅಧಿಕೃತ ಟ್ವಿಟ್ಟರ್ ಮೂಲಕ ಟ್ವೀಟ್ ಮಾಡಲಾಗಿದೆ.

ಮಾನ್ಯ ದಲಿತ ವಿರೋಧಿ ಸಿದ್ದರಾಮಯ್ಯ ಅವರೇ, ನಿಮ್ಮ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ. ದಲಿತ ನಾಯಕ ಪರಮೇಶ್ವರ ಅವರನ್ನು ಕುತಂತ್ರದಿಂದ ಸೋಲಿಸಿದಿರಿ. ದಲಿತ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಮೇಲೆ ದಾಳಿಯಾದಾಗ, ದಾಳಿ ಮಾಡಿದ ಮತಾಂಧರ ಪರವಾಗಿ ನಿಂತಿರಿ. ಈಗ ದಲಿತ ನಾಯಕಿ ಮೋಟಮ್ಮ ಅವರ ಆತ್ಮಕಥನದಲ್ಲಿ ಖಳ ನಾಯಕರಾಗಿದ್ದೀರಿ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರು ಜನ್ಮ ನೀಡಿದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಗೆಲ್ಲುವಲ್ಲಿ ಮೋಟಮ್ಮ ಅವರ ಶ್ರಮ ಮಹತ್ವದ್ದು. ಅಂತಹ ಮೋಟಮ್ಮ ಅವರನ್ನು ಕಾಂಗ್ರೆಸ್ ಹೀನಾಮಾನವಾಗಿ ನಡೆಸಿಕೊಂಡಿದೆ. ಇದು ದಲಿತ ಹಾಗೂ ಮಹಿಳಾ ಸಮುದಾಯಕ್ಕೆ ನೀವು ಮಾಡಿದ ಅವಮಾನ. ದಲಿತ ವರ್ಗದಿಂದ ಬಂದ ಮಹಿಳಾ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೆ, ಅವರನ್ನು ಮಂತ್ರಿಮಂಡಲದಲ್ಲಿ ತೆಗೆದುಕೊಳ್ಳದೆ, ಅವರನ್ನು ಮೂಲೆಗುಂಪು ಮಾಡಿದರು. ದಲಿತರಿಗೆ ಅನ್ಯಾಯ ಮಾಡುವಾಗ ಸಿದ್ದರಾಮಯ್ಯ ಅವರ ಅಹಿಂದ ಮಂತ್ರ ಎಲ್ಲಿತ್ತು ಎಂದು ಪ್ರಶ್ನಿಸಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಸಿದ್ದರಾಮಯ್ಯ ಕಾಂಗ್ರೆಸ್ ಹೇಗೆ ದಲಿತ ವಿರೋಧಿಯಾಗಿ ಬೆಳೆದಿದೆ ಎಂದು ಮಾಜಿ ಸಚಿವೆ ಮೋಟಮ್ಮ ಅವರು ತಮ್ಮ ಆತ್ಮಕಥೆಯಲ್ಲಿ ಕಂಬನಿ ಮಿಡಿದಿದ್ದಾರೆ. ಮಾನ್ಯ ಸಿದ್ದರಾಮಯ್ಯ ಅವರೇ, ಅಹಿಂದ ರಾಜಕಾರಣದಲ್ಲಿ ಈಗ ದಲಿತರನ್ನು ಹೊರಗಿಟ್ಟಿದ್ದೀರಾ? ಇಂದಿರಾಗಾಂಧಿ ಕಾಲದಿಂದಲೂ ಕಾಂಗ್ರೆಸ್ ಕಟ್ಟಾಳುವಾಗಿದ್ದ ಮೋಟಮ್ಮ ಅವರನ್ನು ಸಿದ್ದರಾಮಯ್ಯ ರಾಜಕೀಯವಾಗಿ ಮೂಲೆಗುಂಪು ಮಾಡಿದರು. ಮೋಟಮ್ಮ ಅವರನ್ನು ಸಚಿವರನ್ನಾಗಿ ಮಾಡುವ ಸಂದರ್ಭ ಬಂದಾಗ ವಿಧಾನಪರಿಷತ್ ಸದಸ್ಯರು ಎಂದು ಕಡೆಗಣಿಸಲಾಗಿತ್ತು. ಸಿದ್ದರಾಮಯ್ಯ ಈಗ #ದಲಿತ ವಿರೋಧಿ ಸಿದ್ದರಾಮಯ್ಯ ಆಗಿ ಬದಲಾಗಿದ್ದಾರೆ. ವಿಧಾನ ಪರಿಷತ್ತಿನಲ್ಲಿ ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ಮೋಟಮ್ಮ ಅವರು ಸಚಿವೆಯಾಗುವುದಕ್ಕೆ ಎಲ್ಲಾ ಅರ್ಹತೆ ಹೊಂದಿದ್ದರು. ಆದರೆ ಮೈಸೂರು “ಜಲದರ್ಶಿನಿ” ಬಳಗಕ್ಕೆ ಅವಕಾಶ ನೀಡಬೇಕೆಂಬ ಕಾರಣಕ್ಕೆ ಸಿದ್ದರಾಮಯ್ಯ, ಅರ್ಹ ಮೋಟಮ್ಮ ಅವರನ್ನು ಮೂಲೆಗುಂಪು ಮಾಡಿದರು ಎಂದು ಸುಮಾರು 9 ಟ್ವೀಟ್​​​​​​​ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ಕೆಲವು ದಿನಗಳ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಆರ್​​​ಎಸ್​​ಎಸ್​ ವಿರುದ್ಧ ಹರಿಹಾಯ್ದಿದ್ದರು. ಆರ್​​ಎಸ್​ಎಸ್​ ವಿರುದ್ಧ ಸುಮಾರು 12 ಸರಣಿ ಟ್ವೀಟ್​​​ಗಳನ್ನು ಮಾಡಿ ಪ್ರತಿಯೊಂದೂ ಟ್ವೀಟ್​​ಗೂ #Aryan RSS ಹ್ಯಾಷ್​​ಟ್ಯಾಗ್ ಬಳಸಿದ್ದರು. ಇದೀಗ ಮೋಟಮ್ಮ ಅವರ ಆತ್ಮಕಥನವನ್ನು ಮುಂದಿಟ್ಟುಕೊಂಟು ಬಿಜೆಪಿ, ದಲಿತ ವಿರೋಧಿ ಸಿದ್ದರಾಮಯ್ಯ ಹ್ಯಾಶ್‌ಟ್ಯಾಗ್‌ ಬಳಸಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement