ಕರ್ನಾಟಕದಲ್ಲಿ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ : ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಲ್ಲದೆ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂ. 15 ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಜೂ. 16 ರಿಂದ ಮಳೆ ಬಿರುಸುಗೊಳ್ಳಲಿದೆ ಎಂದು ಅದು ಹೇಳಿದೆ. ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement