ನವದೆಹಲಿ: ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಗಳ ಹೊರಗೆ ಕಾಂಗ್ರೆಸ್ ಬೆಂಬಲಿಗರಿಂದ ಉಂಟಾದ ಗದ್ದಲದ ನಂತರ ಪೊಲೀಸ್ ಬಂಧನದಿಂದ ತಪ್ಪಿಸಿಕೊಳ್ಳಲು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಓಡಿಹೋಗಿದ್ದಾರೆ…!
ಅವರು ಪೊಲೀಸರಿಂದ ತಪ್ಪಿಸಿಕೊಂಡ ಓಡಿಹೋಗಿರುವ ವೀಡಿಯೊ ವೈರಲ್ ಆಗಿದೆ.
ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿದ್ದನ್ನು ಪ್ರತಿಭಟಿಸಲು ತಮ್ಮ ಎಸ್‌ಯುವಿಯಲ್ಲಿ ಇಡಿ ಕಚೇರಿಗೆ ಆಗಮಿಸಿದ ನಂತರ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಪೋಲೀಸ್ ಅಧಿಕಾರಿ ತೆರಳುತ್ತಿದ್ದಂತೆ, ಬಂಧನಕ್ಕೊಳಗಾಗುವುದನ್ನು ತಪ್ಪಿಸಿಕೊಳ್ಳಲು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅಕ್ಷರಶಃ ಸ್ಥಳದಿಂದ ಓಡಿಹೋದರು.
ವಿಪರ್ಯಾಸವೆಂದರೆ ಈ ಘಟನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶ್ರೀನಿವಾಸ, ನಾವು ಪೊಲೀಸರಿಗೆ ಹಾಗೂ ಬಂಧನಕ್ಕೆ ಹೆದರುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಇಡಿ ಹಗರಣದಲ್ಲಿ ಸಿಲುಕಿರುವ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ಖಂಡಿತಾ ಮೆರವಣಿಗೆ ನಡೆಸಲಿದ್ದಾರೆ ಎಂದು ಹೇಳಿದ್ದರು. ಆದರೆಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸ್ ಅಧಿಕಾರಿ ಬಂದಾಗ ಅವರಿಂದ ತಪ್ಪಿಸಿಕೊಳ್ಳಲು ಅಕ್ಷರಶಃ ಓಡಿಹೋಗಿರುವುದು ವೀಡಿಯೊದಲ್ಲಿ ಸೆರೆಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ