ಉಳ್ಳಾಲ: ತಾಯಿಗೆ ಶುಭಾಶಯ ಕೋರಲು ಮೊಬೈಲ್ ಕೊಡದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ತನ್ನ ತಾಯಿಯ ಜನ್ಮದಿನಕ್ಕೆ ಶುಭಾಶಯ ತಿಳಿಸಲು ಮೊಬೈಲ್‌ ಕೇಳಿದರೆ ಶಾಲಾ ಆಡಳಿತ ಮಂಡಳಿಯ ನಿಯಮದಂತೆ ಹಾಸ್ಟೆಲ್‌ ವಾರ್ಡನ್‌ ಮೊಬೈಲ್ ಕೊಡದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಮೃತ ಬಾಲಕನನ್ನು ಬೆಂಗಳೂರು ಹೊಸಕೋಟೆ ಮೂಲದ ಪೂರ್ವಜ್ (14) ಎಂದು ಗುರುತಿಸಲಾಗಿದೆ. ಈತ ಕಿನ್ಯಾ ಶಾರದಾ ವಿದ್ಯಾನಿಕೇತನದಲ್ಲಿ 9ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಜೂನ್ 11 ರಂದು ಆತನ ತಾಯಿ ಜನ್ಮದಿನದ ಹಿನ್ನೆಲೆ ತಾಯಿಗೆ ಕರೆ ಮಾಡಿ ಶುಭಾಷಯ ತಿಳಿಸಲು ಹಾಸ್ಟೆಲ್ ವಾರ್ಡನ್ ಅವರ ಬಳಿ ಮೊಬೈಲ್ ಕೇಳಿದ್ದು, ಮನೆಮಂದಿಯೂ ಪೂರ್ವಜನನ್ನು ಸಂಪರ್ಕಿಸಲು ಯತ್ನಿಸಿದರೂ ಮಾತನಾಡಲು ಬಿಟ್ಟಿರಲಿಲ್ಲ. ಇದರಿಂದ ಮಂಕಾಗಿ ಕುಳಿತಿದ್ದ ಬಾಲಕ ಪೂರ್ವಜ್‌ ಹಾಸ್ಟೆಲ್‌ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡ ವಿದ್ಯಾರ್ಥಿಯೊಬ್ಬ ಸಂಬಂಧಪಟ್ಟವರ ಗಮನಕ್ಕೆ ತಂದನಂತರ ವಿಷಯ ಗೊತ್ತಾಗಿದೆ.
ಬಾಲಕ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಅಮ್ಮನಿಗೆ ಜನ್ಮದಿನದ ಶುಭಾಷಯಗಳು. ಎಲ್ಲರೂ ಖುಷಿಯಾಗಿರಿ, ಶಾಲೆಗೆ ತನಗಾಗಿ ಕಟ್ಟಿರುವ ಶುಲ್ಕವನ್ನು ವಾಪಸ್ಸು ಪಡೆದುಕೊಳ್ಳಿ. ನಿಮ್ಮಿಂದ ನಾನು ದೂರವಾಗುತ್ತಿದ್ದೇನೆ. ಯಾರೂ ಕೂಗಬೇಡಿ ಎಂದು ಆಂಗ್ಲಭಾಷೆಯಲ್ಲಿ ಡೆತ್‌ ನೋಟಲ್ಲಿ ಬರೆದಿಡಲಾಗಿದೆ ಎಂದು ವರದಿಗಳು ತಿಳಿಸಿವೆ.ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆ, ಶಾಲಾ ಪ್ರಾಂಶುಪಾಲರು ಹಾಗೂ ಹಾಸ್ಟೆಲ್‌ ವಾರ್ಡನ್‌ ವಿರುದ್ಧ ಮಂಜುಳಾ ಸಹೋದರ ಅರುಣ್‌ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement