ಬೆಂಗಳೂರು: ಮಾದಕ ವಸ್ತು ಸೇವನೆ ಆರೋಪದಲ್ಲಿ ಬಾಲಿವುಡ್‌ ನಟ ಶಕ್ತಿ ಕಪೂರ್ ಪುತ್ರ ಸಿದ್ಧಾಂತ ಕಪೂರ್ ಬಂಧನ

ಬೆಂಗಳೂರು: ಭಾನುವಾರ ರಾತ್ರಿ ಬೆಂಗಳೂರು ನಗರದಲ್ಲಿ ನಡೆದ ಪಾರ್ಟಿಯೊಂದರಲ್ಲಿ ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಬಾಲಿವುಡ್ ನಟ ಶಕ್ತಿ ಕಪೂರ್ ಅವರ ಪುತ್ರ ಸಿದ್ದಾಂತ್ ಕಪೂರ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಪಾರ್ಟಿ ಆಯೋಜಿಸಿದ್ದ ಪಂಚತಾರಾ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಬಾಲಿವುಡ್​ನ ಖ್ಯಾತ ನಟ ಶಕ್ತಿ … Continued

ಉಳ್ಳಾಲ: ತಾಯಿಗೆ ಶುಭಾಶಯ ಕೋರಲು ಮೊಬೈಲ್ ಕೊಡದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ತನ್ನ ತಾಯಿಯ ಜನ್ಮದಿನಕ್ಕೆ ಶುಭಾಶಯ ತಿಳಿಸಲು ಮೊಬೈಲ್‌ ಕೇಳಿದರೆ ಶಾಲಾ ಆಡಳಿತ ಮಂಡಳಿಯ ನಿಯಮದಂತೆ ಹಾಸ್ಟೆಲ್‌ ವಾರ್ಡನ್‌ ಮೊಬೈಲ್ ಕೊಡದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ಬೆಂಗಳೂರು ಹೊಸಕೋಟೆ ಮೂಲದ ಪೂರ್ವಜ್ (14) ಎಂದು ಗುರುತಿಸಲಾಗಿದೆ. ಈತ ಕಿನ್ಯಾ … Continued

ಕರ್ನಾಟಕದಲ್ಲಿ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ : ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ದಕ್ಷಿಣ ಒಳನಾಡಿನ … Continued

ಯಲ್ಲಾಪುರ: ಸಾವಿರ ವರ್ಷದ ಹಿಂದಿನ ಪುರಾತನ ದೇವಾಲಯದ ಬಳಿ ನಿಧಿಗಾಗಿ ಶೋಧ

ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಹೊನಗದ್ದೆ ಸಮೀಪದ ಗಡುಗದ್ದೆ ಬಳಿ ಇರುವ ಪುರಾತನ ಪಾಳುಬಿದ್ದ ದೇವಾಲಯದ ಬಳಿ ದುಷ್ಕರ್ಮಿಗಳು ನಿಧಿಗಾಗಿ ಶೋಧ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಗಡುಗದ್ದೆ ಬಳಿ ಪಾಳುಬಿದ್ದ ಸ್ಥಿತಿಯಲ್ಲಿ ಇರುವ ಸುಮಾರು ಒಂದೂವರೆ ಸಾವಿರ ವರ್ಷಗಳ ಹಿಂದಿನ ಶಿವ ದೇವಾಲಯದಲ್ಲಿ ಎರಡು ಶಿವ ಲಿಂಗಗಳು, ವರಗಣಪತಿ ಮೂರ್ತಿ, ಮಣ್ಣಿನಲ್ಲಿ … Continued

ಆತ್ಮಕಥನದಲ್ಲಿ ಸಿದ್ದು ವಿರುದ್ಧ ಮೋಟಮ್ಮ ಅಸಮಾಧಾನಕ್ಕೆ ದಲಿತ ವಿರೋಧಿ ಸಿದ್ದರಾಮಯ್ಯ ಎಂದು ಟೀಕಿಸಿದ ಬಿಜೆಪಿ

ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ಮೋಟಮ್ಮ ಅವರ ‘ಬಿದಿರು ನೀನ್ಯಾರಿಗಲ್ಲದವಳು’ ಆತ್ಮಕಥನದಲ್ಲಿ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ತಮ್ಮದೇ ಪಕ್ಷದ ಹಲವರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ‘ಬಿಸಿಲುಗುದುರೆ ಬೆನ್ನೇರಿ’ ಎಂಬ ಭಾಗದಲ್ಲಿ ಸಿದ್ದರಾಮಯ್ಯ ಬಗ್ಗೆ ಅಸಮಾಧಾನ ಹೊರಹಾಕಿರುವ ಮೋಟಮ್ಮ ಅವರು, ”ನನ್ನನ್ನು ಮಂತ್ರಿ ಮಾಡಬಹುದಿತ್ತು ಆದರೆ ಮಾಡಲಿಲ್ಲ, ಸಭಾಧ್ಯಕ್ಷೆ ಆಗುವ ಅವಕಾಶ … Continued