ಬೆಂಗಳೂರು: ಮಧುಮೇಹಿಗಳ ಪಾದದ ಗಾಯಗಳ ಸಮಸ್ಯೆ ನಿವಾರಿಸಲು ವಿನೂತನ ಪಾದರಕ್ಷೆಗಳನ್ನು ಅಭಿವೃದ್ಧಿಪಡಿಸಿದ ಐಐಎಸ್‌ಸಿ ನೇತೃತ್ವದ ತಂಡ

ಬೆಂಗಳೂರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ (ಐಐಎಸ್‌ಸಿ) ಸಂಶೋಧಕರು ಅಸಹಜ ನಡಿಗೆಯಿಂದ ಉಂಟಾದ ಗಾಯಗಳ ಸಮಸ್ಯೆಯನ್ನು 3ಡಿ ಮುದ್ರಿತ ‘ಸ್ನ್ಯಾಪಿಂಗ್’ ಪಾದರಕ್ಷೆಗಳ ಸಹಾಯದಿಂದ ಸಮರ್ಥವಾಗಿ ಪರಿಹರಿಸಿದ್ದಾರೆ. ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಎಂಡೋಕ್ರೈನಾಲಜಿ ಮತ್ತು ರಿಸರ್ಚ್ (KIER) ಸಹಯೋಗದೊಂದಿಗೆ, ಸಂಶೋಧಕರು ಅಸಹಜ ನಡಿಗೆಯಿಂದ ಉಂಟಾಗುವ ಅಸಮ ಒತ್ತಡವನ್ನು ನಿವಾರಣೆ ಮಾಡಲು ಸಹಾಯ ಮಾಡುವ ಜೋಡಿ ಪಾದರಕ್ಷೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಂದೂ ಹಾಜರಾಗುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಸತತ ಎರಡನೇ ದಿನವೂ ಎಂಟು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು ಮತ್ತು ವಿರೋಧ ಪಕ್ಷವು ತನ್ನ ಪ್ರತಿಭಟನೆಯನ್ನು ಮುಂದುವರೆಸಿದ ನಂತರವೂ ಬುಧವಾರ ಮತ್ತೆ ಹಾಜರಾಗುವಂತೆ ಸಮನ್ಸ್ ನೀಡಿದೆ. ದಿನಕ್ಕೆ 10 ಗಂಟೆಗಳಿಗೂ ಹೆಚ್ಚು ಕಾಲ … Continued

ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ಪರಿಷತ್ ಸದಸ್ಯರು ಪಕ್ಷಬೇಧ ಮರೆತು ಧ್ವನಿ ಎತ್ತಲಿ :ಸ್ವರ್ಣವಲ್ಲೀ ಶ್ರೀಗಳ ಕರೆ

ಯಲ್ಲಾಪುರ: ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಪಕ್ಷಬೇಧ ಮರೆತು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಹಾಗೂ ನಮ್ಮ ಧ್ವನಿಯನ್ನು ಸರ್ಕಾರಕ್ಕೆ ತಲುಪಿಸಬೇಕು. ಜುಲೈ ತಿಂಗಳ ಅಧಿವೇಶನದಲ್ಲೂ ಈ ಬಗೆಗೆ ಧ್ವನಿ ಎತ್ತಬೇಕು ಎಂದು ಸ್ವರ್ಣವಲ್ಲಿಯ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಕರೆ ನೀಡಿದ್ದಾರೆ. ಉತ್ತರ … Continued

ರಾಷ್ಟ್ರಪತಿ ಸ್ಪರ್ಧೆಯಿಂದ ಹಿಂದೆ ಸರಿದ ಶರದ್ ಪವಾರ್, ಮಮತಾ ಬ್ಯಾನರ್ಜಿ ಪ್ರಸ್ತಾಪ ತಿರಸ್ಕಾರ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿಯಾದರು. ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ಶರದ್ ಪವಾರ್ ಅವರನ್ನು ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷದ ಅಭ್ಯರ್ಥಿಯಾಗುವಂತೆ ಕೇಳಿಕೊಂಡರು. ಆದಾಗ್ಯೂ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಈ ಪ್ರಸ್ತಾಪವನ್ನು ನಿರಾಕರಿಸಿದರು ಹಾಗೂ … Continued

ಇಡಿ ವಿಚಾರಣೆಯಿಂದ ಹೊರಬರುತ್ತಿದ್ದಂತೆ ಮಹಾ ಜುಮ್ಲಾಗಳ ಸರ್ಕಾರ ಎಂದು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ರಾಹುಲ್‌ ಗಾಂಧಿ

ನವದೆಹಲಿ: ಎರಡನೇ ದಿನದ ಜಾರಿ ನಿರ್ದೇನಾಲಯ(ಇಡಿ)ದ ವಿಚಾರಣೆ ಮುಗಿಸಿ ಹೊರಬರುತ್ತಿದ್ದಂತೆಯೇ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ ಕನಿಷ್ಠ 10 ಲಕ್ಷ ಯುವಜನರಿಗೆ ಉದ್ಯೋಗವನ್ನು ಒದಗಿಸುತ್ತೇವೆ ಎಂಬ ಕೇಂದ್ರ ಸರ್ಕಾರದ ಭರವಸೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, … Continued

ಮೇಲುಕೋಟೆಯ ಬಾಹುಬಲಿ ರಾಮಸ್ವಾಮಿ ಅಯ್ಯಂಗಾರ್​​​​​​​ ನಿಧನ

ಮಂಡ್ಯ: ಮೇಲುಕೋಟೆ ಬಾಹುಬಲಿ ಎಂದೇ ಹೆಸರಾಗಿದ್ದ ರಾಮಸ್ವಾಮಿ ಅಯ್ಯಂಗಾರ್ ಇಂದು, ಮಂಗಳವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ದೇವಾಲಯವು ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದು. ಕ್ರಿ.ಶ 12ನೇ ಶತಮಾನದಲ್ಲಿ ವೈಷ್ಣವ ಸಂತ ಶ್ರೀ ರಾಮಾನುಜಾಚಾರ್ಯರು ಇಲ್ಲಿ ಹಲವು ವರ್ಷಗಳ ಕಾಲ … Continued

ಬೆಂಗಳೂರು ನಗರದ ಎರಡು ಶಾಲೆಗಳ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ದಿನದಿಂದ ದಿನಕ್ಕೆ ತುಸು ಏರಿಕೆಯಾಗುವ ಮಧ್ಯೆಯೇ ಬೆಂಗಳೂರಿನ ಎರಡು ಶಾಲೆಗಳ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿಗೆ ಒಳಗಾಗಿರುವ ಮಕ್ಕಳ ಆರೋಗ್ಯದ ಮೇಲೆ ಬಿಬಿಎಂಪಿ ನಿಗಾ ವಹಿಸುವುದರ ಜತೆಗೆ ಎರಡೂ ಶಾಲೆಗಳನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿ ಶಾಲೆಗೆ ರಜೆ ನೀಡಲಾಗಿದೆ. ನಗರದ ದಾಸರಹಳ್ಳಿ ವಲಯದ ರಾಜ ಗೋಪಾಲನಗರದಲ್ಲಿರುವ ನ್ಯೂ … Continued

ಸಿನೆಮಾ ಶೂಟಿಂಗ್‌ ವೇಳೆ ಖ್ಯಾತ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು

ಹೈದರಾಬಾದ್‌: ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರಿಗೆ ಚಲನಚಿತ್ರದ ಶೂಟಿಂಗ್‌ ಸೆಟ್‌ನಲ್ಲಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೈದರಾಬಾದ್‌ನಲ್ಲಿ ಬಿಗ್ ಬಿ ಮತ್ತು ಪ್ರಭಾಸ್ ನಟನೆಯ `ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. ಈಗವರು ಚೇತರಿಸಿಕೊಂಡಿದ್ದು ಅವರನ್ನು ಡಿಸ್ಚಾರ್ಜ್‌ ಮಾಡಲಾಗಿದೆ  ಹಾಗೂ ಸೆಟ್‌ಗೆ ಮರಳಿದ್ದಾರೆ ಎಂದು ವರದಿಗಳು ತಿಳಿಸಿವೆ. ದೀಪಿಕಾ … Continued

ಪ್ರವಾದಿ ವಿವಾದದ ಮಧ್ಯೆ ಕುವೈತ್‌ಗೆ 192 ಮೆಟ್ರಿಕ್‌ ದೇಸೀ ಹಸುವಿನ ಸಗಣಿ ರಫ್ತು ಮಾಡಲಿರುವ ಭಾರತ…!

ಜೈಪುರ: ಜೈಪುರ ಮೂಲದ ಸಂಸ್ಥೆಯು ಕುವೈತ್‌ಗೆ ಹಸುವಿನ ಸಗಣಿ ರಫ್ತು ಮಾಡಲು ಸಿದ್ಧವಾಗಿದೆ, ಇದು ಉಭಯ ದೇಶಗಳ ನಡುವಿನ ಈ ತರಹದ ಮೊದಲ ಒಪ್ಪಂದವಾಗಿದೆ ಎಂದು ಹೇಳಲಾಗುತ್ತದೆ. ಕುವೈತ್ ಮೂಲದ ಲಾಮರ್ 192 ಮೆಟ್ರಿಕ್ ಟನ್ ದೇಶಿ ಹಸುವಿನ ಸಗಣಿ ಆಮದು ಮಾಡಿಕೊಳ್ಳಲು ಆರ್ಡರ್ ಮಾಡಿದೆ. ಜೈಪುರ ಮೂಲದ ಕಂಪನಿ ಸನ್‌ರೈಸ್ ಅಗ್ರಿಲ್ಯಾಂಡ್ ಮತ್ತು ಡೆವಲಪ್‌ಮೆಂಟ್ … Continued

ಕರ್ನಾಟಕದ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇಮಕ

ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ (ಭೀಮನಗೌಡ ಸಂಗನಗೌಡ ಪಾಟೀಲ​ ) ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ರಾಜ್ಯ ಸರ್ಕಾರದ ಶಿಫಾರಸಿನ ಮೇರೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಂಕಿತ ಹಾಕಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು … Continued