ಇಡಿ ವಿಚಾರಣೆಯಿಂದ ಹೊರಬರುತ್ತಿದ್ದಂತೆ ಮಹಾ ಜುಮ್ಲಾಗಳ ಸರ್ಕಾರ ಎಂದು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ರಾಹುಲ್‌ ಗಾಂಧಿ

ನವದೆಹಲಿ: ಎರಡನೇ ದಿನದ ಜಾರಿ ನಿರ್ದೇನಾಲಯ(ಇಡಿ)ದ ವಿಚಾರಣೆ ಮುಗಿಸಿ ಹೊರಬರುತ್ತಿದ್ದಂತೆಯೇ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಂದಿನ ಒಂದೂವರೆ ವರ್ಷದಲ್ಲಿ ಕನಿಷ್ಠ 10 ಲಕ್ಷ ಯುವಜನರಿಗೆ ಉದ್ಯೋಗವನ್ನು ಒದಗಿಸುತ್ತೇವೆ ಎಂಬ ಕೇಂದ್ರ ಸರ್ಕಾರದ ಭರವಸೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, 8 ವರ್ಷಗಳ ಹಿಂದೆ ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಲಾಗಿತ್ತು, ಈಗ 10 ಲಕ್ಷ ಸರ್ಕಾರಿ ಉದ್ಯೋಗಗಳ ಸರದಿ ಬಂದಿದೆ. ಇದು ಜುಮ್ಲಾ ಸರ್ಕಾರವಲ್ಲ, ಇದು ‘ಮಹಾ ಜುಮ್ಲಾ’ಗಳ ಸರ್ಕಾರ. ಪ್ರಧಾನಿಯವರು ಉದ್ಯೋಗಗಳನ್ನು ಸೃಷ್ಟಿಸುವುದರಲ್ಲಿ ಪರಿಣತರಲ್ಲ, ಆದರೆ ಉದ್ಯೋಗಗಳ ಕುರಿತು ‘ಸುದ್ದಿ’ ಮಾಡುವುದರಲ್ಲಿ ಪರಿಣಿತರು” ಎಂದು ರಾಹುಲ್​ ಗಾಂಧಿ ಹಿಂದಿಯಲ್ಲಿ ಟ್ವೀಟ್​ ಮಾಡಿ ಟೀಕಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದ ರಾಹುಲ್​ ಗಾಂಧಿಗೆ ಇಂದು, ಮಂಗಳವಾರ ಕೂಡ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅದರಂತೆ ಸತತ ಎರಡನೇ ದಿನವು ರಾಹುಲ್‌ ಗಾಂಧಿ ಇಡಿ ವಿಚಾರಣೆಗೆ ಹಾಜರಾಗಿದ್ದರು.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

ಮುಂದಿನ ಒಂದೂವರೆ ವರ್ಷದ ಅವಧಿಯಲ್ಲಿ ವಿವಿಧ ಇಲಾಖೆ ಮತ್ತು ಸಚಿವಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ 10 ಲಕ್ಷ ನೇಮಕಾತಿಯನ್ನು ಕೇಂದ್ರ ಸರ್ಕಾರ ಮಾಡಿಕೊಳ್ಳಲಿದೆ ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ಟ್ವೀಟ್‌ ಮೂಲಕ ತಿಳಿಸಿದೆ. ಪಿಎಂಒ ಶೇರ್‌ ಮಾಡಿದ ಟ್ವೀಟ್ ಪ್ರಕಾರ, ನೇಮಕಾತಿ ಪ್ರಕ್ರಿಯೆಯನ್ನು ಮಿಷನ್‌ ಮೋಡ್‌ನಲ್ಲಿ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲ ಇಲಾಖೆ ಮತ್ತು ಸಚಿವಾಲಯಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ.
2014ರ ಲೋಕಸಭಾ ಚುನಾವಣೆ ವೇಳೆ ನರೇಂದ್ರ ಮೋದಿಯವರು ಉದ್ಯೋಗ ಸೃಷ್ಟಿಯ ಭರವಸೆ ನೀಡುತ್ತಿದ್ದರು. ಆದರೆ ನುಡಿದಂತೆ ನಡೆದಿಲ್ಲ. ಈಗ ಹೆಚ್ಚುತ್ತಿರುವ ನಿರುದ್ಯೋಗದ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಸುಳ್ಳು ಭರವಸೆ ನೀಡುತ್ತಿದ್ದಾರೆಂದು ರಾಹುಲ್‌ ಗಾಂಧಿ ಆರೋಪ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement