ಕರ್ನಾಟಕದ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇಮಕ

ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ (ಭೀಮನಗೌಡ ಸಂಗನಗೌಡ ಪಾಟೀಲ​ ) ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ರಾಜ್ಯ ಸರ್ಕಾರದ ಶಿಫಾರಸಿನ ಮೇರೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಂಕಿತ ಹಾಕಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.ಬಿ.ಎಸ್‌.ಪಾಟೀಲ ಅವರು ಪ್ರಸ್ತುತ ಉಪಲೋಕಾಯುಕ್ತರಾಗಿದ್ದರು.

ನ್ಯಾ.ಬಿ.ಎಸ್‌.ಪಾಟೀಲ್‌ 14 ವರ್ಷಗಳ ಕಾಲ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೂ ಮುನ್ನ ಅವರು 20 ವರ್ಷಗಳ ಕಾಲ ವಕೀಲರಾಗಿದ್ದರು. 2019ರ ನವೆಂಬರ್​ನಲ್ಲಿ ಇವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಮೂರು ತಿಂಗಳ ಹಿಂದೆ ವಿಶ್ವನಾಥ್ ಶೆಟ್ಟಿಯವರಿಂದ ತೆರವಾದ ಸ್ಥಾನಕ್ಕೆ ಬಿ.ಎಸ್.ಪಾಟೀಲ್ ನೇಮಕಗೊಂಡಿದ್ದು 8ನೇ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement