ಬೆಂಗಳೂರು ನಗರದ ಎರಡು ಶಾಲೆಗಳ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ದಿನದಿಂದ ದಿನಕ್ಕೆ ತುಸು ಏರಿಕೆಯಾಗುವ ಮಧ್ಯೆಯೇ ಬೆಂಗಳೂರಿನ ಎರಡು ಶಾಲೆಗಳ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸೋಂಕಿಗೆ ಒಳಗಾಗಿರುವ ಮಕ್ಕಳ ಆರೋಗ್ಯದ ಮೇಲೆ ಬಿಬಿಎಂಪಿ ನಿಗಾ ವಹಿಸುವುದರ ಜತೆಗೆ ಎರಡೂ ಶಾಲೆಗಳನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿ ಶಾಲೆಗೆ ರಜೆ ನೀಡಲಾಗಿದೆ. ನಗರದ ದಾಸರಹಳ್ಳಿ ವಲಯದ ರಾಜ ಗೋಪಾಲನಗರದಲ್ಲಿರುವ ನ್ಯೂ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಮತ್ತು ಎಂಇಎಸ್ ಪಬ್ಲಿಕ್ ಸ್ಕೂಲ್ ಎರಡು ಖಾಸಗಿ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ 5 ಮತ್ತು 6ನೇ ತರಗತಿಯಲ್ಲಿ ಓದುತ್ತಿದ್ದ 21 ಮಕ್ಕಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಎಂಇಎಸ್ ಪಬ್ಲಿಕ್ ಸ್ಕೂಲ್‌ನಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ 10 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸದ್ಯಕ್ಕೆ ಎಲ್ಲಾ ಮಕ್ಕಳಿಗೂ ಮತ್ತು ಶಾಲಾ ಸಿಬ್ಬಂದಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ. ಕೊರೋನಾ ಸೋಂಕಿತ ಮಕ್ಕಳೆಲ್ಲರೂ ಕೂಡ ಕ್ಷೇಮವಾಗಿದ್ದು, ಆತಂಕ ಪಡುವಂತ ಅಗತ್ಯವಿಲ್ಲ ಎಂದು ಸ್ಥಳೀಯ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ಈ ಕುರಿತು ಪ್ರತಿಕ್ರಿಯಿಸಿದ ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ, ಇದೇ ತಿಂಗಳು ಲಸಿಕೆ ಹಾಕಲು ತಂಡ ತೆರಳಿತ್ತು.ಈ ವೇಳೆ ಅನಾರೋಗ್ಯದ ಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ ರಾಟ್ ಪರೀಕ್ಷೆ ಮಾಡಿದಾಗ ಕೋವಿಡ್ ದೃಢ ಪಟ್ಟಿದೆ.
ಎರಡೂ ಶಾಲೆಯ 31 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ ಪಟ್ಟಿದೆ. ಉಳಿದ ಹತ್ತು ವಿದ್ಯಾರ್ಥಿಗಳ ವರದಿ ಇನ್ನೂ ಬರಬೇಕಿದೆ. ಕೋವಿಡ್ ಕಾಣಿಸಿಕೊಂಡ ಎರಡು ಶಾಲೆಗಳನ್ನ ಸದ್ಯಕ್ಕೆ ಬಂದ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಶಿಕ್ಷಕರಿಗೂ ಕೋವಿಡ್ ಟೆಸ್ಟ್ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ. ನಗರದ ಎಲ್ಲಾ ಶಾಲೆಗಳಲ್ಲೂ ಕೋವಿಡ್ ನಿಯಮ ಪಾಲನೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ಕೆಲ ಶಾಲೆಗಳಲ್ಲಿ ಕೋವಿಡ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಹಿಂದಿನಂತೆ ಶಾಲೆಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಖು ಎಂದು ಶಾಲೆಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ.

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement