ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ನೇಮಕಾತಿಗೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್‌‌ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ಪ್ರಧಾನಿ ನರೇಂದ್ರ ಮೋದಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ಸೂಚನೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್‌‌ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ನಿರ್ದೇಶನ ನೀಡಿದ್ದಾರೆ.

ಈ ಕುರಿತು ಪ್ರಧಾನಿ ಕಚೇರಿ ಟ್ವೀಟರ್‌‌ನಲ್ಲಿ ಮಾಹಿತಿ ನೀಡಿದ್ದು, ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ದೊಡ್ಡ ಹೆಜ್ಜೆ ಇಡಲು ಮುಂದಾಗಿದೆ.ಈ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಮೋದಿ ಸರ್ಕಾರ 10 ಲಕ್ಷ ಉದ್ಯೋಗಗಳನ್ನು ನೀಡಲಿದೆ ಎಂದು ತಿಳಿಸಿದೆ.

“ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದ್ದಾರೆ” ಎಂದು ಪಿಎಂಒ ಟ್ವೀಟ್‌ನಲ್ಲಿ ತಿಳಿಸಿದೆ.
ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಹೊರಬಿದ್ದಿದೆ. ವಿವಿಧ ಸರ್ಕಾರಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಆಗಾಗ್ಗೆ ಫ್ಲ್ಯಾಗ್ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement