ಕರ್ನಾಟಕ ನೂತನ ಲೋಕಾಯುಕ್ತರಾಗಿ ಬಿ.ಎಸ್.ಪಾಟೀಲ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ (ಬಿ.ಎಸ್‌.ಪಾಟೀಲ) ಅವರು ಇಂದು, ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ನೂತನ ಲೋಕಾಯುಕ್ತರಿಗೆ ಭೀಮನಗೌಡ ಸಂಗನಗೌಡ ಪಾಟೀಲ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಧಿಕಾರದ ಗೌಪ್ಯತೆ ಬೋಧಿಸಿದರು. ದೇವರ ಹೆಸರಲ್ಲಿ ನೂತನ ಲೋಕಾಯುಕ್ತ ನ್ಯಾಯಮೂರ್ತಿಗಳು ಅಧಿಕಾರ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಅರಗ ಜ್ಞಾನೇಂದ್ರ, ವಿ.ಸೋಮಣ್ಣ, ಹಾಲಪ್ಪ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಈ ಹಿಂದೆ ಲೋಕಾಯುಕ್ತ ನ್ಯಾಯಮೂರ್ತಿಯಾಗಿದ್ದ ಪಿ.ವಿಶ್ವನಾಥ್ ಶೆಟ್ಟಿ ಸೇವೆಯಿಂದ ನಿವೃತ್ತರಾಗಿದ್ದ ಹಿನ್ನೆಲೆಯಲ್ಲಿ ತೆರವಾಗಿತ್ತು. ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರು ಕಳೆದ ಜನವರಿ 27ರಂದು ಸೇವೆಯಿಂದ ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು. ಈ ಸ್ಥಾನಕ್ಕೆ ಹಾಲಿ ಉಪಲೋಕಾಯುಕ್ತರಾಗಿದ್ದ ಬಿ.ಎಸ್.ಪಾಟೀಲ್ ಅವರನ್ನು ಲೋಕಾಯುಕ್ತ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಸರ್ಕಾರ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿತ್ತು.
ಸರ್ಕಾರದ ಶಿಫಾರಸ್ಸನ್ನು ನಿನ್ನೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅನುಮೋದಿಸಿದ್ದರು. 1956ರಲ್ಲಿ ಜನಿಸಿದ ಬಿ.ಎಸ್.ಪಾಟೀಲ್ 1980ರಲ್ಲಿ ವಕೀಲ ವೃತ್ತಿಯನ್ನು ಪ್ರಾರಂಭಿಸಿದರು. 2004ರಲ್ಲಿ ಹೈಕೋರ್ಟ್‍ನ ಖಾಯಂ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ಹಲವು ಪ್ರಕರಣಗಳಲ್ಲಿ ಕೆಲವು ಮಹತ್ವದ ತೀರ್ಪುಗಳನ್ನು ನೀಡಿ ಗಮನ ಸೆಳೆದಿದ್ದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement