ಕೋವಿಡ್‌ನಿಂದಾಗಿ ಸ್ಮರಣಶಕ್ತಿ ಹೋಗಿ ಯಾವುದೂ ನೆನಪಾಗುತ್ತಿಲ್ಲ : ಇಡಿ ವಿಚಾರಣೆ ವೇಳೆ ಎಎಪಿ ನಾಯಕ ಸತ್ಯೇಂದ್ರ ಜೈನ್ ಉತ್ತರ..!

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿರುದ್ಧ ದೆಹಲಿ ನ್ಯಾಯಾಲಯವು ಮಂಗಳವಾರ (ಜೂನ್ 14, 2022) ತನ್ನ ಆದೇಶವನ್ನು ಕಾಯ್ದಿರಿಸಿದೆ. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಜೈನ್ ಮತ್ತು ಇಡಿ ಅವರ ವಾದವನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಸಂಸ್ಥೆ ಜೈನ್ ಅವರನ್ನು ಕಸ್ಟಡಿಗೆ ತೆಗೆದುಕೊಂಡಿತ್ತು. ನ್ಯಾಯಾಲಯವು ಜೂನ್ 18 ರಂದು ಆದೇಶವನ್ನು ಪ್ರಕಟಿಸುವ ನಿರೀಕ್ಷೆಯಿದೆ. ಇಡಿ ಮೇ 30 ರಂದು ಜೈನ್ ಅವರನ್ನು ಬಂಧಿಸಿತ್ತು ಮತ್ತು ಸೋಮವಾರ ಅವರನ್ನು ಜೂನ್ 27 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

advertisement

ಇಡಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ವಿ ರಾಜು ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸೇವಕರಾಗಿರುವ ಸತ್ಯೇಂದರ್ ಜೈನ್ ಅವರ ನಡವಳಿಕೆಯನ್ನು ವಿರೋಧಿಸಿದ್ದಾರೆ, ಅವರು ಹಣ ವರ್ಗಾವಣೆ ಹವಾಲಾ ಚಾನೆಲ್‌ನಲ್ಲಿ ತೊಡಗಿಸಿಕೊಂಡಿದ್ದಾರೆ, ಇದು ಜಾಮೀನು ನೀಡುವ ಪ್ರಕರಣವಲ್ಲ ಎಂದು ಹೇಳಿದ್ದಾರೆ.
ಅವರು ಪ್ರಭಾವಶಾಲಿಯಾಗಿದ್ದಾರೆ, ತನಿಖೆ ಇನ್ನೂ ನಡೆಯುತ್ತಿರುವುದರಿಂದ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ.

ಓದಿರಿ :-   ಬಿಹಾರ ಸರ್ಕಾರದ ಸಭೆಗಳಲ್ಲಿ ಈಗ ಲಾಲು ಅಳಿಯನ ದರ್ಬಾರ...!

ಸತ್ಯೇಂದರ್​​ನಿಂದ ಯಾವುದೇ ಹೇಳಿಕೆ ಪಡೆಯುವುದಿದ್ದರೂ ಲಿಖಿತ ರೂಪದಲ್ಲೇ ಪಡೆಯಬೇಕು. ಇಲ್ಲದಿದ್ದರೆ ಅವರು ತಾನು ಹಾಗೆ ಹೇಳಿಯೇ ಇಲ್ಲ ಎಂದು ಬಿಡುತ್ತಾರೆ ಎಂದು ತಿಳಿಸಿದ್ದಾರೆ. ಹವಾಲಾ ವಹಿವಾಟು ಕುರಿತ ದಾಖಲೆಗಳನ್ನು ಸತ್ಯೇಂದರ್ ಮುಂದಿಟ್ಟರೆ, ಆತ ತನಗೆ ಕೋವಿಡ್ ಸೋಂಕು ತಗಲಿದ್ದು, ಆ ಬಳಿಕ ನೆನಪಿನ ಶಕ್ತಿ ಕಳೆದುಕೊಂಡಿದ್ದೇನೆ ಎಂಬುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ ಎಂದು ರಾಜು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.
ಅಕ್ರಮ ಹಣ ವಿನಿಮಯ ಆರೋಪದ ಮೇಲೆ ಮೇ 30ರಂದು ಸತ್ಯೇಂದರ್ ಬಂಧನವಾಗಿದ್ದು, ಅಕ್ರಮ ಸಂಪಾದನೆ ಆರೋಪದ ಮೇಲೆ ಸಚಿವರ ಅಲ್ಲದೆ,. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈನ್ ಮತ್ತು ಆತನೊಂದಿಗೆ ನಂಟು ಹೊಂದಿರುವವರ ವಿರುದ್ಧ ದಾಳಿ ನಡೆಸಿದ ಇಡಿ 2 ಕೋಟಿ ರೂ.ಗಳಿಗೂ ಹೆಚ್ಚು ನಗದು ಮತ್ತು 1.8 ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಂಡಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement