ತುಮಕೂರು: ಹಾಡಹಗಲೇ ಮಚ್ಚು, ಲಾಂಗ್‌ನಿಂದ ಹಲ್ಲೆ ನಡೆಸಿ ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ (50) ಎಂಬುವರನ್ನು ಬರ್ಬರ ಕೊಲೆ ಮಾಡಿದ ಘಟನೆ ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ನಡೆದ ಬಗ್ಗೆ ವರದಿಯಾಗಿದೆ.
ಗುಬ್ಬಿ ಪಟ್ಟಣದ ಬಿ.ಎಸ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಹೆದ್ದಾರಿ ಪಕ್ಕದಲ್ಲಿ ಕೊಲೆ ನಡೆದಿದೆ.
advertisement
ಹೆದ್ದಾರಿ ಪಕ್ಕದಲ್ಲೇ ಟೀ ಅಂಗಡಿಯಲ್ಲಿ ಸ್ನೇಹಿತರ ಜತೆ ಚಹಾ ಕುಡಿಯುತ್ತ ಕುಳಿತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಮಚ್ಚು, ಲಾಂಗ್‌ಗಳಿಂದ ಮನಸೋ ಇಚ್ಛೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ನರಸಿಂಹಮೂರ್ತಿಯವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಹಣಕಾಸಿನ ವಿಷಯ ಹಾಗೂ ಆಸ್ತಿ ವಿಷಯದ ಕಾರಣವೂ ಇರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಎಲ್ಲ ಕೋನದಿಂದಲೂ ತನಿಖೆ ನಡೆಸುತ್ತಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ