ರಾಷ್ಟ್ರಕವಿ ಕುವೆಂಪುಗೆ ಅವಮಾನ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ: ಶಿಕ್ಷಣ ಸಚಿವ ನಾಗೇಶ

ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ. ಹೀಗಾಗಿ ಅವರು ಮೊದಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಯಲಿ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ.
ಜನರನ್ನು ದಾರಿ ತಪ್ಪಿಸಲು ಏನೇನೊ ಹೇಳುತ್ತಿದ್ದಾರೆ. ಶಿಕ್ಷಣದ ಕೇಸರೀಕರಣ ಎಂದರೆ ಏನೆಂದು ಅವರು ಮೊದಲು ಹೇಳಲಿ. ಅದರ ಬಗ್ಗೆ ಮಾತನಾಡಲು ನಾವು ಸಿದ್ಧರಿದ್ದೇವೆ’ ಎಂದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕುವೆಂಪು ಅವರ ನಾಡಗೀತೆ ತಿರುಚಿದ್ದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ. ಅವರು ಆಗ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ತಿರುಚಿದ ನಾಡಗೀತೆ ಫಾರ್ವರ್ಡ್ ಮಾಡಿದ್ದ ರೋಹಿತ್ ಚಕ್ರತೀರ್ಥರ ಮೇಲೆ ಕೇಸ್ ಹಾಕಲಾಗಿತ್ತು. ಆಗ ಅವರದ್ದೇ ಸರ್ಕಾರ ಬಿ ರಿಪೋರ್ಟ್ ಕೊಟ್ಟಿತ್ತು. ಈಗ ಬೇರೆಯದನ್ನೇ ಹೇಳುತ್ತಿದ್ದಾರೆ. ಹೀಗಾಗಿ ನೈತಿಕತೆ ಇದ್ದರೆ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಮೊದಲು ರಾಜೀನಾಮೆ ನೀಡಿ ನಂತರ ಮಾತಾಡಲಿ’ ಎಂದರು.
ಕುವೆಂಪು ಅವರ ರಾಮಾಯಣ ದರ್ಶನಂ ಪಾಠವನ್ನು ಕೈಬಿಟ್ಟು ಅವಮಾನ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ. ಬರಗೂರ ರಾಮಚಂದ್ರಪ್ಪ ಸಮಿತಿ ಅವಧಿಯಲ್ಲಿನ ಪಠ್ಯಕ್ರಮ ಪರಿಷ್ಕರಣೆ ವಿಚಾರವನ್ನು ನಾವು ಈಗ ಸಾರ್ವಜನಿಕರ ಮುಂದೆ ಇಡುತ್ತೇವೆ ಎಂದಾಗ ಈಗ ಬೇಡದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ವೈಚಾರಿಕವಾಗಿ ಮಾತನಾಡಲು ಅವರ ಬಳಿ ಈಗ ಏನೂ ಇಲ್ಲ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement