ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಮಹಾತ್ಮ ಗಾಂಧಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಹೆಸರು ಪ್ರಸ್ತಾಪಿಸಿದ ಎಡಪಕ್ಷಗಳು: ವರದಿ

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಮಹಾತ್ಮಾ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಎಡಪಕ್ಷಗಳು ಸೂಚಿಸಿವೆ. ಆದರೆ ಗೋಪಾಲ ಗಾಂಧಿ ಈ ಬಗ್ಗೆ ಯೋಚಿಸಲು ಕಾಲಾವಕಾಶ ಕೋರಿದ್ದಾರೆ.
ಮಂಗಳವಾರ ಶರದ್ ಪವಾರ್ ಅವರನ್ನು ಭೇಟಿಯಾದ ಎಡಪಕ್ಷಗಳು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲ ಗಾಂಧಿ ಅವರ ಹೆಸರನ್ನು ಸೂಚಿಸಿವೆ ಎಂದು ಮೂಲಗಳು ತಿಳಿಸಿವೆ.

ನನ್ನ ಹೆಸರಿನ ಸುತ್ತ ಒಮ್ಮತ ಮೂಡಿದರೆ ಅಂತಹ ಅಭ್ಯರ್ಥಿಯಾಗಲು ಪರಿಗಣಿಸುತ್ತೀರಾ ಎಂದು ನನ್ನನ್ನು ಕೇಳಲಾಗಿದೆ. ಈ ಮಹತ್ವದ ಸಲಹೆಯ ಬಗ್ಗೆ ಯೋಚಿಸಲು ನನಗೆ ಸ್ವಲ್ಪ ಸಮಯ ಬೇಕು ಎಂದು ನಾನು ಹೇಳಿದ್ದೇನೆ” ಎಂದು ಗೋಪಾಲಕೃಷ್ಣ ಗಾಂಧಿ ಇಂಡಿಯಾ ಟುಡೇ ಜೊತೆ ಮಾತನಾಡುವಾಗ ತಿಳಿಸಿದ್ದಾರೆ.
ಸಂಬಂಧಿಸಿದ ಎಲ್ಲರೊಂದಿಗೆ ಸಮಾಲೋಚನೆಗಳು ನಡೆಯುತ್ತಿವುದರಿಂದ ಈ ಸಮಯದಲ್ಲಿ ಈ ಬಗ್ಗೆ ಹೆಚ್ಚಿನದನ್ನು ಹೇಳುವುದು ಅಕಾಲಿಕ ಎಂದು ಅವರು ಹೇಳಿದ್ದಾರೆ.
2017 ರಲ್ಲಿ ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಗಾಂಧಿಯವರು ಒಮ್ಮತದ ವಿರೋಧ ಪಕ್ಷದ ಅಭ್ಯರ್ಥಿಯಾಗಿದ್ದರು, ಆದರೆ ಚುನಾವಣೆಯಲ್ಲಿ ಎಂ ವೆಂಕಯ್ಯ ನಾಯ್ಡು ವಿರುದ್ಧ ಸೋತಿದ್ದರು.

ಪ್ರಮುಖ ಸುದ್ದಿ :-   ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

77 ವರ್ಷದ ಮಾಜಿ ಅಧಿಕಾರಿ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾಕ್ಕೆ ಭಾರತದ ಹೈ ಕಮಿಷನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಮಹಾತ್ಮಾ ಗಾಂಧಿ ಮತ್ತು ಸಿ ರಾಜಗೋಪಾಲಾಚಾರಿಯವರ ಮೊಮ್ಮಗ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಚರ್ಚಿಸಲು ವಿವಿಧ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಕೆಲವು ನಾಯಕರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೆಸರನ್ನು ಪ್ರಸ್ತಾಪಿಸಿದ್ದಾರೆ, ಆದರೆ ಅವರು ಸ್ಪರ್ಧಿಸಲು ನಿರಾಕರಿಸಿದ್ದಾರೆ.
ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಜುಲೈ 18 ರಂದು ಚುನಾವಣೆ ನಡೆಯಲಿದೆ. ಕಳೆದ ರಾಷ್ಟ್ರಪತಿ ಚುನಾವಣೆಯಲ್ಲಿ ಕೋವಿಂದ್ ಅವರು ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಸೋಲಿಸಿದ್ದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement