ರಾಷ್ಟ್ರಪತಿ ಚುನಾವಣೆ: ಅಧಿಸೂಚನೆ ಪ್ರಕಟಿಸಿದ ಚುನಾವಣಾ ಆಯೋಗ

ನವದೆಹಲಿ: ಜುಲೈನಲ್ಲಿ ನಡೆಯುವ ರಾಷ್ಟ್ರಪತಿ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಅಧಿಸೂಚನೆ ಪ್ರಕಟಿಸಿದೆ.
ಅಧಿಸೂಚನೆ ಪ್ರಕಾರ, ಜೂನ್ 29 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜೂನ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜುಲೈ 02ರಂದು ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ. ಜುಲೈ 18 ಸೋಮವಾರದಂದು ಮತದಾನ ನಡೆಯಲಿದೆ. ಹಾಗೂ ಜುಲೈ 21ರಂದು ಮತ ಎಣಿಕೆ ನಡೆಯಲಿದೆ.
ಜುಲೈ 24ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅವಧಿ ಮುಗಿಯಲಿದ್ದು ಆ ಸ್ಥಾನಕ್ಕೆ ಅವಧಿ ಮುಕ್ತಾಯವಾಗುವ ವೇಳೆಗೆ ಚುನಾವಣೆ ಪ್ರಕ್ರಿಯೆ ಮುಗಿಯಬೇಕಿದೆ.

advertisement

ನೂತನ ರಾಷ್ಟ್ರಪತಿ ಯಾರಾಗಬಹುದು ಎಂಬ ಕುತೂಹಲ ಜನರಲ್ಲಿ ಹೆಚ್ಚಾಗಿದೆ. ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಮಹತ್ವದ ಸಭೆ ಕರೆದಿದ್ದರು. 17 ಪಕ್ಷಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಆಮ್​ ಆದ್ಮಿ ಪಕ್ಷ, ಟಿಆರ್​​ಎಸ್, ಬಿಜು ಜನತಾದಳ, ವೈಎಸ್‌ಆರ್‌ ಕಾಂಗ್ರೆಸ್‌ ಹಾಗೂ ಶಿರೋಮಣಿ ಅಕಾಲಿದಳದ ನಾಯಕರು ಹಾಜರಾಗಿರಲಿಲ್ಲ. ಕಳೆದ ವಾರ 22 ವಿರೋಧ ಪಕ್ಷಗಳ ನಾಯಕರಿಗೆ ಪತ್ರ ಬರೆದಿದ್ದ ಮಮತಾ ಬ್ಯಾನರ್ಜಿ, ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಚರ್ಚಿಸಲು ಜೂನ್ 15 ರಂದು ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು.
ಇನ್ನು ಆಡಳಿತಾರೂಢ ಎನ್‌ಡಿಎ ಯಾರನ್ನು ಅಭ್ಯರ್ಥಿ ಮಾಡಲಿದೆ ಎಂಬ ಕುತೂಹಲವಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಹಾನಿ: ರಾಹುಲ್ ಗಾಂಧಿ ವಯನಾಡ್ ಕಚೇರಿ ಇಬ್ಬರು ಸಿಬ್ಬಂದಿ ಸೇರಿ ನಾಲ್ವರ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement