11ನೇ ಮಹಡಿಯಿಂದ ಜಿಗಿದು ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವೈದ್ಯ ಆತ್ಮಹತ್ಯೆ

ಬೆಂಗಳೂರು: ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರೊಬ್ಬರು ವಸತಿ ಸಮುಚ್ಚಯದ 11ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡ ವೈದ್ಯರನ್ನು ಡಾ. ಪೃಥ್ವಿರಾಜ  ರೆಡ್ಡಿ (31) ಎಂದು ಗುರುತಿಸಲಾಗಿದೆ. ಅವರು ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಹಾಗೂ ಇವರ ಪತ್ನಿಯೂ ವೈದ್ಯೆಯೇ ಆಗಿದ್ದಾರೆ ಎಂದು ಹೇಳಲಾಗಿದೆ.
ಪೃಥ್ವಿರಾಜ್ ರೆಡ್ಡಿ ಆಂಧ್ರ ಪ್ರದೇಶದ ಮೂಲದವರಾಗಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ಪೃಥ್ವಿ ರೆಡ್ಡಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ಗೊತ್ತಾಗಿಲ್ಲ. ಆದರೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು, ಮದುವೆಯ ಬಳಿಕವೂ ಈ ಸಮಸ್ಯೆ ಕಂಡುಬಂದಿದ್ದರಿಂದ ಒಂದು ವಾರದಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಆದರೆ ತನಿಖೆ ಬಳಿಕವಷ್ಟೇ ನಿಖರ ಕಾರಣ ಗೊತ್ತಾಗಲಿದೆ.

 

ಪ್ರಮುಖ ಸುದ್ದಿ :-   ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement