ಅಗ್ನಿಪಥ ಯೋಜನೆ ಸರಿಯಾದ ದಿಕ್ಕಿನ ಸುಧಾರಣೆ ಕ್ರಮ, ಸಶಸ್ತ್ರ ಪಡೆಗಳು ಉದ್ಯೋಗ ಖಾತರಿ ಕಾರ್ಯಕ್ರಮವಾಗಬಾರದು: ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ನೂತನ ಅಗ್ನಿಪಥ ಯೋಜನೆಯು ಸರಿಯಾದ ದಿಕ್ಕಿನಲ್ಲಿ ಹೆಚ್ಚು ಅಗತ್ಯವಿರುವ ಸುಧಾರಣೆಯಾಗಿದೆ. ಸಶಸ್ತ್ರ ಪಡೆಗಳು ಉದ್ಯೋಗ ಖಾತರಿ ಕಾರ್ಯಕ್ರಮವಾಗಬಾರದು ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ಮನೀಶ್ ತಿವಾರಿ ಗುರುವಾರ ಹೇಳಿದ್ದಾರೆ.
ದಶಕಗಳಷ್ಟು ಹಳೆಯದಾದ ಆಯ್ಕೆ ಪ್ರಕ್ರಿಯೆಯ ಪ್ರಮುಖ ಬದಲಾವಣೆಯಾಗಿ, ನಾಲ್ಕು ವರ್ಷಗಳ ಅಲ್ಪಾವಧಿಯ ಒಪ್ಪಂದದ ಆಧಾರದ ಮೇಲೆ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೈನಿಕರ ನೇಮಕಾತಿಗಾಗಿ ಸರ್ಕಾರವು ಮಂಗಳವಾರ ವಿನೂತನ ಯೋಜನೆಯನ್ನು ಅನಾವರಣಗೊಳಿಸಿದೆ.

“ಅಗ್ನಿಪಥ ನೇಮಕಾತಿ ಪ್ರಕ್ರಿಯೆಯ ಬಗ್ಗೆ ಕಾಳಜಿ ಹೊಂದಿರುವ ಯುವಕರೊಂದಿಗೆ ನಾನು ಸಹಾನುಭೂತಿ ಹೊಂದಿದ್ದೇನೆ. ವಾಸ್ತವವೆಂದರೆ ಭಾರತಕ್ಕೆ ತಂತ್ರಜ್ಞಾನದ ಮೇಲೆ ಮಾನವ ಹೆಜ್ಜೆಗುರುತನ್ನು ಹೊಂದಿರುವ, ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಕಿರಿಯ ಸಶಸ್ತ್ರ ಪಡೆ ಅಗತ್ಯವಿದೆ. ಒಕ್ಕೂಟದ ಸಶಸ್ತ್ರ ಪಡೆಗಳು ಕೇವಲ ಉದ್ಯೋಗ ಖಾತರಿ ಕಾರ್ಯಕ್ರಮವಾಗಬಾರದು ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಅವರ ಈ ನಿಲುವು ಅವರ ಪಕ್ಷದೊಂದಿಗೆ ಭಿನ್ನಾಭಿಪ್ರಾಯದ ನಿಲುವು ಹೊಂದಿವೆ, ಕಾಂಗ್ರೆಸ್‌ ಪಕ್ಷವು ಯೋಜನೆ ಬಗ್ಗೆ ಸರ್ಕಾರವನ್ನು ಟೀಕಿಸಿದೆ ಮತ್ತು ಅದನ್ನು ಸ್ಥಗಿತಗೊಳಿಸಬೇಕು ಮತ್ತು ತಜ್ಞರು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ. ಆದರೆ ಕಾಂಗ್ರೆಸ್‌ ನಾಯಕ ಮನೀಶ ತಿವಾರಿ ಅಗ್ನಿಪಥ ನೂತನ ಯೋಜನೆ ಬಗ್ಗೆ ಪಕ್ಷಕ್ಕಿಂತ ಭಿನ್ನವಾದ ನಿಲುವು ವ್ಯಕ್ತಪಡಿಸಿದ್ದಾರೆ ಹಾಗೂ ಸರ್ಕಾರದ ನಿರ್ಧಾರದ ಬಗ್ಗೆ ಸಹಮತ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   'ಅಕ್ರಮ' ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

ಯೋಜನೆಯಡಿಯಲ್ಲಿ, 17.50 ವರ್ಷದಿಂದ 21 ವರ್ಷ ವಯಸ್ಸಿನ ಯುವಕರು ಸೇನೆಯ ಮೂರು ಸೇವೆಗಳಿಗೆ ಸೇರ್ಪಡೆಗೊಳ್ಳುತ್ತಾರೆ. ನಾಲ್ಕು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ, ನಿಯಮಿತ ಸೇವೆಗಾಗಿ 25 ಪ್ರತಿಶತದಷ್ಟು ನೇಮಕಾತಿಗಳನ್ನು ಉಳಿಸಿಕೊಳ್ಳುವ ಅವಕಾಶವನ್ನು ಯೋಜನೆಯು ಒದಗಿಸುತ್ತದೆ.
ಇದು ಹೊಸ ಮಾದರಿಯು ಸಶಸ್ತ್ರ ಪಡೆಗಳಿಗೆ ಹೊಸ ಸಾಮರ್ಥ್ಯಗಳನ್ನು ತರುವುದು ಮಾತ್ರವಲ್ಲದೆ ಖಾಸಗಿ ವಲಯದಲ್ಲಿ ಯುವಕರಿಗೆ ಮಾರ್ಗಗಳನ್ನು ತೆರೆಯುತ್ತದೆ ಎಂದು ಸರ್ಕಾರ ಹೇಳಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement