ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳ: 833 ಮಂದಿಗೆ ಹೊಸದಾಗಿ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಂದು, ಗುರುವಾರ ಇನ್ನಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 833 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 458 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗೂ ಪಾಸಿಟಿವಿಟಿ ರೇಟ್ ಶೇ. 3.47ಕ್ಕೆ ಏರಿಕೆಯಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 4,371ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು, ಗುರುವಾರ 791 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,199ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 10 ಜಿಲ್ಲೆಗಳಲ್ಲಿ 42 ಪ್ರಕರಣಗಳು ದಾಖಲಾಗಿದೆ. ಮತ್ತು 19 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಇಂದು ಒಟ್ಟು 45,352 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಹಾಗೂ ಒಟ್ಟು 23,990 ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ -791, ಮೈಸೂರು -12, ದಕ್ಷಿಣಕನ್ನಡ -6, ಉಡುಪಿ -5, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಬಳ್ಳಾರಿ ತಲಾ 4, ಧಾರವಾಡ 3, ಬೆಳಗಾವಿ 2, ರಾಮನಗರ ಮತ್ತು ಉತ್ತರಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ರಾಜ್ಯದಲ್ಲಿ ಒಟ್ಟು 833 ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement