ಹುಬ್ಬಳ್ಳಿ ಕಿಮ್ಸ್‌ನಲ್ಲಿ ಮಗು ಅಪಹರಣ ಪ್ರಕರಣ: ತಾಯಿ-ಕುಟುಂಬದತ್ತ ಸಂಶಯದ ಬೊಟ್ಟು..?!

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯ ಮಕ್ಕಳ ವಾರ್ಡ್‌ನಿಂದ ನಾಲ್ಕು ದಿನಗಳ ಹಿಂದೆ ನಡೆದಿದ್ದ, 40 ದಿನದ ಹೆಣ್ಣು ಮಗು ಅಪಹರಣ ಮತ್ತು ಮಾರನೇ ದಿನವೇ ದಿಢೀರ್‌ ಪ್ರತ್ಯಕ್ಷ ಪತ್ತೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಕಂಡುಬಂದಿದ್ದು, ಮಗುವಿನ ತಾಯಿಯೇ ಪ್ರಕರಣದ ಸೂತ್ರಧಾರಿಯೇ ಎಂಬ ಸಂಶಯ ವ್ಯಕ್ತವಾಗಿದೆ. ಪೊಲೀಸರು ಈ ನಿಟ್ಟಿನಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಜೂನ್ 13ರಂದು ಕಿಮ್ಸ್‌ನಲ್ಲಿ … Continued

ಸಿಂಹಿಣಿ ಮತ್ತು 40 ಮೊಸಳೆಗಳು… ನದಿಯಲ್ಲಿ ಸತ್ತ ಹಿಪ್ಪೋ ಮೇಲೆ ನಿಂತ ಸಿಂಹಿಣಿಯನ್ನು ಸುತ್ತುವರಿದ 40 ಮೊಸಳೆಗಳು :ಮುಂದೇನಾಯ್ತು ನೋಡಿ

ನೀರಿನಲ್ಲಿ ಸುಮಾರು 40 ಮೊಸಳೆಗಳು ಸುತ್ತುವರಿದ ಹಾಗೂ ಈ ಮೊಸಳೆಗಳ ಮಧ್ಯೆ ಸಿಂಹವು ಸತ್ತ ಹಿಪ್ಪೋ ಮೇಲೆ ಸಿಕ್ಕಿಹಾಕಿಕೊಂಡ ಅದ್ಭುತ ಕ್ಷಣ ಕ್ಯಾಮರಾದಲ್ಲಿ ಸೆರೆಯಾಗಿದೆ. ಆಂಟೋನಿ ಪೆಸಿ ಅವರು ಮೇ 23, 2022 ರಂದು ಕೀನ್ಯಾದ ಮಸಾಯಿ ಮಾರಾ ರಾಷ್ಟ್ರೀಯ ಮೀಸಲು ಪ್ರದೇಶದಲ್ಲಿ ಗೇಮ್ ಡ್ರೈವ್‌ನಲ್ಲಿ ಈ ವೀಡಿಯೊವನ್ನು ಸೆರೆಹಿಡಿದಿದ್ದಾರೆ. ಅವರು ನದಿಯಲ್ಲಿ ಹಸಿದ ಪ್ರಾಣಿಭಕ್ಷಕಗಳಿಂದ … Continued

ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಎಳೆದ ಕಾಂಗ್ರೆಸ್ ನಾಯಕಿ | ವೀಕ್ಷಿಸಿ

ಹೈದರಾಬಾದ್‌: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಪ್ರಶ್ನಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಗುರುವಾರ ಹೈದರಾಬಾದ್‌ನ ರಾಜಭವನದ ಬಳಿ ಪ್ರತಿಭಟನೆ ನಡೆಸಿದ ನಂತರ ಉದ್ವಿಗ್ನತೆ ಉಂಟಾಗಿತ್ತು. ಪ್ರತಿಭಟನೆಯ ವೀಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಪೊಲೀಸ್ ಸಿಬ್ಬಂದಿ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್‌ನಿಂದ ರಾಜಭವನ ಚಲೋ, ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಪೊಲೀಸರ ವಶಕ್ಕೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ವಿರೋಧಿಸಿ ರಾಜಭವನ ಚಲೋ ಹೊರಟ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಹೊರಟ ಕಾಂಗ್ರೆಸ್ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್‌ಪ್ರೆಸ್‌ ವೃತ್ತದ ಬಳಿ ತಡೆದಿದ್ದಾರೆ ಹಾಗೂ ಮುಂದಕ್ಕೆ ಹೋಗದಂತೆ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನೆಯಲ್ಲಿ … Continued

ಹೊಸ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್ ಸಂಪರ್ಕ ಇನ್ಮುಂದೆ ದುಬಾರಿ: ಹೆಚ್ಚಳ ಇಂದಿನಿಂದಲೇ ಜಾರಿಗೆ

ನವದೆಹಲಿ: ಇನ್ಮುಂದೆ ಹೊಸದಾಗಿ ಎಲ್‌ಪಿಜಿ ಸಿಲಿಂಡರ್ ಸಂಪರ್ಕ ಪಡೆಯಬೇಕೆಂದಿದ್ದರೆ ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಹೌದು ಇನ್ನು ಎಲ್‌ಪಿಜಿ ಸಂಪರ್ಕ ದುಬಾರಿಯಾಗಲಿದ್ದು ಇದು ಇಂದಿನಿಂದ ( ಜೂ 16) ಜಾರಿಗೆ ಬರಲಿದೆ. ಈಗಾಗಲೇ ಹೆಚ್ಚಿನ LPG ಬೆಲೆಗಳು ಮತ್ತು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಎದುರಿಸುತ್ತಿರುವ ಸಾಮಾನ್ಯ ಜನರಿಗೆ ಇತ್ತೀಚಿನ ಕ್ರಮವು ಮತ್ತೊಂದು ಹೊರೆಯಾಗಬಹುದು. ಇತ್ತೀಚಿನ ಪರಿಷ್ಕರಣೆಯೊಂದಿಗೆ, … Continued

ಪರಿಷತ್‌ ಚುನಾವಣೆ: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‍ ಗೆಲುವು

ಮೈಸೂರು: ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಗೆಲುವು ಸಾಧಿಸಿದರು. ಜೆಡಿಎಸ್ – ಬಿಜೆಪಿ ಕೋಟೆಯನ್ನು ಕಾಂಗ್ರೆಸ್ ಛಿದ್ರ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಎರಡನೇ ಸ್ಥಾನ ಪಡೆದರೆ ಜೆಡಿಎಸ್ ಮೂರನೇ ಸ್ಥಾನವನ್ನು ಪಡೆದಿದೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲುವಿಗೆ ನಿಗದಿಪಡಿಸಿದ್ದ ಕೋಟಾವನ್ನು … Continued

ಅಪರೂಪದ ಘಟನೆ…..ಗಟಾರದಲ್ಲಿದ್ದ ಇಲಿಗಳ ಬಾಯಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ…!

ಮುಂಬೈ: ವಿಲಕ್ಷಣ ಘಟನೆಯೊಂದರಲ್ಲಿ, ಮುಂಬೈನ ಗೋಕುಲಧಾಮ್ ಕಾಲೋನಿ ಬಳಿಯ ಗಟಾರದಲ್ಲಿದ್ದ ಇಲಿಗಳಿಂದ 5 ಲಕ್ಷ ರೂಪಾಯಿ ಮೌಲ್ಯದ 10 ತೊಲ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಬ್ ಇನ್ಸ್‌ಪೆಕ್ಟರ್ ಜಿ ಘಾರ್ಗೆ ಗುರುವಾರ ತಿಳಿಸಿದ್ದಾರೆ. ಕೆಲವು ಇಲಿಗಳು ಕಸದ ರಾಶಿಯಿಂದ ಚಿನ್ನದ ಚೀಲವನ್ನು ಗಟಾರಕ್ಕೆ ತೆಗೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಪೊಲೀಸರು ಚಿನ್ನಾಭರಣಗಳನ್ನು … Continued

ರಾಯಚೂರು: ಕಲುಷಿತ ನೀರು ಸರಬರಾಜು ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ರಾಯಚೂರು: ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ರಾಯಚೂರಿನಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈಗ ಇದರಿಂದ ಮತ್ತೊಬ್ಬರು ಸಾವಿಗೀಡಾಗಿದ್ದು ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಮಚ್ಚಿಬಜಾರ್ ನಿವಾಸಿ ಶಮೀಮ್ ಬೇಗಂ(48) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವಾಂತಿ, ಭೇದಿ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ, ಮೇ 29ರಂದು ಖಾಸಗಿ ಆಸ್ಪತ್ರೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ … Continued

ಸಣ್ಣ ಉಳಿತಾಯ ಯೋಜನೆ RD ಬಡ್ಡಿದರಗಳನ್ನು ಹೆಚ್ಚಿಸಿದ ಎಸ್‌ಬಿಐ… ಮಾಹಿತಿ ಇಲ್ಲಿದೆ

ನವದೆಹಲಿ: ದೇಶದ ಅತಿದೊಡ್ಡ ಬ್ಯಾಂಕ್‌ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮರುಕಳಿಸುವ ಠೇವಣಿಗಳ (recurring deposits -RD) ಬಡ್ಡಿದರಗಳನ್ನು ಹೆಚ್ಚಿಸಿದೆ. ದರಗಳು ಜೂನ್ 14 ರಿಂದ ಜಾರಿಗೆ ಬರುತ್ತವೆ. ಕನಿಷ್ಠ ₹100 ಠೇವಣಿಗೆ ಎಸ್‌ಬಿಐನಲ್ಲಿ ಆರ್‌ಡಿ ತೆರೆಯಬಹುದು. RD ಖಾತೆಯನ್ನು 12 ತಿಂಗಳಿಂದ 10 ವರ್ಷಗಳ ನಡುವಿನ ಅವಧಿಗೆ ತೆರೆಯಬಹುದು. ಸ್ಥಿರ ಠೇವಣಿ … Continued

ಅಗ್ನಿಪಥ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಸೇನಾ ಆಕಾಂಕ್ಷಿಗಳಿಂದ ಪ್ರತಿಭಟನೆ, ರೈಲಿಗೆ ಬೆಂಕಿ, ಪೊಲೀಸರಿಂದ ಅಶ್ರುವಾಯು ಪ್ರಯೋಗ

ನವದೆಹಲಿ: ನಾಲ್ಕು ವರ್ಷಗಳ ಗುತ್ತಿಗೆ ಆಧಾರದ ಮೇಲೆ ಸೈನಿಕರನ್ನು ಸೇನೆಗೆ ನೇಮಕ ಮಾಡಿಕೊಳ್ಳುವ ಅಗ್ನಿಪಥ್ ಯೋಜನೆಯನ್ನು ಕೇಂದ್ರವು ಘೋಷಿಸಿದ ಎರಡು ದಿನಗಳ ನಂತರ, ಸೇನಾ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಭದ್ರತೆ ಮತ್ತು ಪಿಂಚಣಿ ಬಗ್ಗೆ ಕಳವಳ ವ್ಯಕ್ತಪಡಿಸಿ ಬಿಹಾರ ಮತ್ತು ರಾಜಸ್ಥಾನದಲ್ಲಿ ಪ್ರತಿಭಟನೆಗಳನ್ನು ನಡೆಸಿದರು. ವಿದ್ಯಾರ್ಥಿಗಳು ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಕಲ್ಲು ತೂರಾಟ ನಡೆಸಿದರು.  ಬಿಹಾರದ … Continued