ಜೂ.21ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ‘ಯೋಗ ದಿನಾಚರಣೆ’ ಆಚರಿಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಜೂನ್‌ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, 21-06-2022ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್ ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ತಿಳಿಸಿದ್ದಾರೆ.

ಜೂನ್‌ 21ರಂದು ಮಂಗಳವಾರ ದಿನದ ಮೊದಲ ಒಂದೂವರೆ ಗಂಟೆಯ ಅವಧಿಯಲ್ಲಿ ವಿದ್ಯಾರ್ಥಿಗಳ ವಯಸ್ಸಿಗೆ ಅನುಗಣವಾದ ಯೋಗಾಸನಗಳ ಅಭ್ಯಾಸಗಳನ್ನು ಹಾಗೂ ಪ್ರದರ್ಶನಗಳನ್ನು ಹಮ್ಮಿಕೊಳ್ಳಲು ಸೂಚಿಸಿದೆ. ಆ ದಿನದ ಪಾಠವನ್ನು ಜೂನ್‌ 25, ಶನಿವಾರದಂದು ಪೂರ್ಣ ದಿನ ಶಾಲೆ ನಡೆಸಿ ಸರಿದೂಗಿಸುವಂತೆ ಸೂಚಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement