ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ರಾಜ್ಯಕ್ಕೆ

posted in: ರಾಜ್ಯ | 0

ಬೆಂಗಳೂರು : ನಾಳೆ, ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಚಿತ್ರದುರ್ಗದ ಶ್ರೀ ಮುರುಘಾ ಮಠಕ್ಕೆ ಭೇಟಿ ನೀಡಲಿದ್ದಾರೆ.
ನಾಳೆ, ಶನಿವಾರ ಬೆಳಗ್ಗೆ 11:50ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 12:30ಕ್ಕೆ ಯಲಹಂಕದ ರಮಾಡ ಹೋಟೆಲ್​ನಲ್ಲಿ ನಡೆಯುತ್ತಿರುವ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ವರ್ಗದ ಶಿಬಿರದಲ್ಲಿ ಭಾಗಿಯಾಗಲಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮಧ್ಯಾಹ್ನ 1.30ರಿಂದ 2:15ರವರೆಗೆ ಸಮಯವನ್ನು ಕಾಯ್ದಿರಿಸಲಾಗಿದೆ. ರಾಜ್ಯ ರಾಜಕೀಯ ವಿಷಯಗಳ ಬಗ್ಗೆ ರಾಜ್ಯದ ನಾಯಕರ ಸಭೆ ನಡೆಸುವ ಸಾಧ್ಯತೆ ಇದೆ. ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸುವ ಸಾಧ್ಯತೆ ಇದೆ. ಮಧ್ಯಾಹ್ನ 2:45ಕ್ಕೆ ಜಕ್ಕೂರು ಏರೋಡ್ರಮ್​ನಿಂದ ಕಾಪ್ಟರ್ ಮೂಲಕ ಜೆಪಿ ನಡ್ಡಾ ಚಿತ್ರದುರ್ಗಕ್ಕೆ ತೆರಳಲಿದ್ದಾರೆ.
ಸಂಜೆ 4 ಗಂಟೆಗೆ ಮುರುಘಾ ಮಠಕ್ಕೆ ತೆರಳಿ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಭೇಟಿಯಾಗಲಿದ್ದಾರೆ‌. 5:30ಕ್ಕೆ ಚಿತ್ರದುರ್ಗದಿಂದ ಹೊರಟು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು,‌ 7: 40ರ ವಿಮಾನದ ಮೂಲಕ ನವದೆಹಲಿಗೆ ತೆರಳಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಬುರಗಿ; ಇಬ್ಬರು ಮಕ್ಕಳನ್ನು ಕೊಂದು ಶವದೊಂದಿಗೆ ಠಾಣೆಗೆ ಬಂದು ಶರಣಾದ ತಂದೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ