ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್ ಸಹೋದರ ಅಗ್ರಸೇನ ಗೆಹ್ಲೋಟ್ ನಿವಾಸದ ಮೇಲೆ ಸಿಬಿಐ ದಾಳಿ

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳವು ದಾಳಿ ನಡೆಸಿದೆ. ಅಗ್ರಸೇನ ಗೆಹ್ಲೋಟ್ ರಸಗೊಬ್ಬರ ವ್ಯಾಪಾರಿಯಾಗಿದ್ದು, ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸಲಾಗಿತ್ತು. ರಾಹುಲ್ ಗಾಂಧಿ ವಿರುದ್ಧದ ಇಡಿ ತನಿಖೆಗೆ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ನಡುವೆ ಈ ದಾಳಿ ನಡೆದಿದೆ.
ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಅಗ್ರಸೇನ ಗೆಹ್ಲೋಟ್ 2007 ಮತ್ತು 2009 ರ ನಡುವೆ ಸಬ್ಸಿಡಿ ರಸಗೊಬ್ಬರವನ್ನು ರಫ್ತು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮೂಲಗಳ ಪ್ರಕಾರ, ಅಗ್ರಸೇನ ಗೆಹ್ಲೋಟ್ ಅವರು 2007 ರಿಂದ 2009 ರ ಅವಧಿಯಲ್ಲಿ ಹೆಚ್ಚಿನ ಪ್ರಮಾಣದ ಮ್ಯೂರಿಯೇಟ್ ಆಫ್ ಪೊಟ್ಯಾಶ್ (MoP) ಅನ್ನು ವಿದೇಶಗಳಿಗೆ ವಿದೇಶಗಳಿಗೆ ರಫ್ತು ಮಾಡಿದರು, ಅದು ಸಬ್ಸಿಡಿ ದರದಲ್ಲಿ ಭಾರತೀಯ ರೈತರಿಗೆ ಮೀಸಲಾದ ಗೊಬ್ಬರವಾಗಿತ್ತು.
ಎಂಒಪಿ ದೇಶದ ಬಡ ರೈತರಿಗೆ ಉದ್ದೇಶಿಸಲಾಗಿತ್ತು. ಅಗ್ರಸೇನ ಗೆಹ್ಲೋಟ್ ಅವರು ತಮ್ಮ ಕಂಪನಿ ಅನುಪಮ ಕೃಷಿ ಮೂಲಕ MoP ಅನ್ನು ಸಬ್ಸಿಡಿ ದರದಲ್ಲಿ ಖರೀದಿಸಿದರು ಮತ್ತು ನಂತರ ಅದನ್ನು ಮಲೇಷ್ಯಾ ಮತ್ತು ವಿಯೆಟ್ನಾಂನಂತಹ ದೇಶಗಳಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರು” ಎಂದು ಜಾರಿ ನಿರ್ದೇಶನಾಲಯ (ED) ಶೋಧ ಕಾರ್ಯಾಚರಣೆ ನಡೆಸಿದ ನಂತರ 2020 ರಲ್ಲಿ ಹೇಳಿತ್ತು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಬಹುಮತ ಕಳೆದುಕೊಂಡ ಉದ್ಧವ್ ಠಾಕ್ರೆ, ಬಹುಮತ ಪರೀಕ್ಷೆ ಎದುರಿಸಲೇಬೇಕು: ರಾಜ್ಯಪಾಲರಿಗೆ ಬಿಜೆಪಿ ಪತ್ರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ