ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್‌ : ರಾಜ್ಯದ 80 ಕಡೆ ಏಕಕಾಲದಲ್ಲಿ ದಾಳಿ

posted in: ರಾಜ್ಯ | 0

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ 21 ಅಧಿಕಾರಿಗಳ ಮೇಲೆ ಶುಕ್ರವಾರ ಬೆಳ್ಳಂಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿದ್ದು, 80 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ 21 ಜನರ ವಿರುದ್ಧ ಮೊಕದ್ದಮೆ ದಾಖಲಿಸಿದ್ದು, ಆರೋಪಿತರ ಮನೆ, ಕಚೇರಿಗಳು, ಅವರ ಸಂಬಂಧಿಕರು ಮತ್ತು ಆಪ್ತರ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಶೋಧ ನಡೆಸಲಾಗುತ್ತಿದೆ. ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಸಂಸ್ಥೆಯ 300ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಹೇಳಲಾಗಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಬೆಳಗಾವಿಯ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಭೀಮರಾವ್‌ ವೈ. ಪವಾರ್‌, ಸಣ್ಣ ನೀರಾವರಿ ಇಲಾಖೆಯ ಉಡುಪಿ ವಿಭಾಗದ ಸಹಾಯಕ ಎಂಜಿನಿಯರ್‌ ಹರೀಶ್‌, ಹಾಸನ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ರಾಮಕೃಷ್ಣ ಎಚ್.ವಿ., ಬಾಗಲಕೋಟೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಎನ್‌. ಪಡಸಾಲಿ, ಬಾಗಲಕೋಟೆಯ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಪ್ಪ ನಾಗಪ್ಪ ಗೋಗಿ, ಗದಗ ಜಿಲ್ಲೆಯಲ್ಲಿನ ಪಂಚಾಯಿತಿ ಕಾರ್ಯದರ್ಶಿ ಪ್ರದೀಪ್‌ ಎಸ್.‌ ಆಲೂರು, ಬೆಂಗಳೂರಿನ ಉಪ ಮುಖ್ಯ ವಿದ್ಯುತ್‌ ನಿರೀಕ್ಷಕ ತಿಪ್ಪಣ್ಣ ಪಿ. ಸಿರಸಗಿ, ಬೀದರ್‌ನ ಕರ್ನಾಟಕ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಸಹಾಯಕ ನಿಯಂತ್ರಕ ಮೃತ್ಯುಂಜ ಚನ್ನಬಸಯ್ಯ ತಿರಣಿ, ಕಾರವಾರದ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್‌ ರಾಜೀವ್‌ ಪುರಸಯ್ಯ ನಾಯಕ್‌, ಪೊನ್ನಂಪೇಟೆಯ ಜಿಲ್ಲಾ ಪಂಚಾಯತ್‌ ವಿಭಾಗದ ಕಿರಿಯ ಎಂಜಿನಿಯರ್‌ ಬಿ.ಆರ್‌. ಬೋಪಯ್ಯ, ಬೆಳಗಾವಿಯ ಜಿಲ್ಲಾ ನೋಂದಣಾಧಿಕಾರಿ ಮಧುಸೂದನ, ಸಣ್ಣ ನೀರಾವರಿ ಇಲಾಖೆಯ ಹೂವಿನಹಡಗಲಿ ಉಪ ವಿಭಾಗದ ಸಹಾಯಕ ಎಂಜಿನಿಯರ್‌ ಪರಮೇಶ್ವರಪ್ಪ, ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ನಿವೃತ್ತ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಮಂಜುನಾಥ್‌ ಜಿ., ಬಿಡಿಎ ಸಿ ದರ್ಜೆ ನೌಕರ ಶಿವಲಿಂಗಯ್ಯ, ಕೊಪ್ಪಳದ ಪೊಲೀಸ್‌ ಇನ್‌ಸ್ಪೆಕ್ಟರ್‌ ಉದಯ ರವಿ, ಕಡೂರು ಪುರಸಭೆಯ ನಿರ್ವಾಹಕ ಬಿ.ಜಿ. ತಿಮ್ಮಯ್ಯ, ರಾಣೆಬೆನ್ನೂರಿನ ನಗರ ಯೋಜನಾ ಕಚೇರಿಯ ಚಂದ್ರಪ್ಪ ಸಿ. ಹೊಳೇಕರ್‌ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ನಿವೃತ್ತ ಕುಲಸಚಿವ ಜನಾರ್ದನ, ಜಲ ಸಂಪನ್ಮೂಲ ಇಲಾಖೆಯ ಚಿಕ್ಕಬಳ್ಳಾಪುರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಮೋಹನಕುಮಾರ್‌, ಉತ್ತರ ಕನ್ನಡ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್‌ ಅವರ ಮನೆ ಹಾಗೂ ಆಸ್ತಿಗಳ ಮೇಲೆ ತನಿಖಾ ಸಂಸ್ಥೆ ದಾಳಿ ಮಾಡಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇಂದು, ಶುಕ್ರವಾರ ಬೆಳ್ಳಂಬೆಳಿಗ್ಗೆ ಆರು ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಎಸಿಬಿ ದಾಳಿ ಮಾಡಿದೆ.

ಓದಿರಿ :-   ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ

 

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ