ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಭರದಲ್ಲಿ ನನ್ನ ಮೇಲೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಿದ್ದರಾಮಯ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಎಸ್.ಸಿ. ಮೋರ್ಚಾ ವತಿಯಿಂದ ಇಂದು, ಶುಕ್ರವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಭರದಲ್ಲಿ ನೀವು ಸದಾ ಅಸ್ಪೃಶ್ಯರು ಎಂದು ನಮ್ಮ ಜಾತಿ ನಿಂದನೆ ಮಾಡಿದ್ದಾರೆ. ಸಿದ್ದರಾಮಯ್ಯ ಬಗ್ಗೆ ನಮಗೆ ಬಹಳ ಗೌರವ ಇದೆ. ಅವರು ಮುಖ್ಯಮಂತ್ರಿ ಆಗಿದ್ದವರು, ಇಂದು ವಿಪಕ್ಷ ನಾಯಕರಾಗಿದ್ದಾರೆ. ಈ ತಿಂಗಳ 7ರಂದು ನಾರಾಯಣಸ್ವಾಮಿಯವರೇ, ನೀವು ಸದಾ ಅಸ್ಪೃಶ್ಯರು ಎಂದು ನನ್ನನ್ನು ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಿಮ್ಮ ಗುಲಾಮ ಮನಸ್ಥಿತಿಗೆ ನನ್ನ ಧಿಕ್ಕಾರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನನ್ನನ್ನ ನಿಂದಿಸುವ ಭರದಲ್ಲಿ ನನ್ನ ಜಾತಿಯನ್ನು ಸಹ ನಿಂದಿಸಿದ್ದಾರೆ. ಹೀಗಾಗಿ ದೌರ್ಜನ್ಯ ತಡೆ ಕಾಯ್ದೆಅಡಿ ದೂರು ನೀಡಿದ್ದೇನೆ. ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ.
ನಮ್ಮನ್ನು ಗುಲಾಮರು, ಅಸ್ಪಷ್ಯರು ಎಂದು ಕರೆದು ನಿಂದಿಸಿದ್ದಾರೆ. ಇಂಥ ನಿಂದನೆಯ ಅಧಿಕಾರ ಅವರಿಗೆ ಇಲ್ಲ. ಎಸ್ಸಿ, ಎಸ್ಟಿ, ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಈ ದೂರು ನೀಡಿದ್ದೇವೆ. ಅವರು ಜಾತಿ ನಿಂದನೆ ಮಾಡಿದ್ದು, ಎಫ್‍ಐಆರ್ ಮಾಡಿ ಬಂಧಿಸಲು ಒತ್ತಾಯಿಸಿದ್ದೇನೆ. ಅವರನ್ನು ಬಂಧಿಸುವಲ್ಲಿ ವಿಳಂಬ ಮಾಡಿದರೆ ಧರಣಿ ಮಾಡುವುದಾಗಿ,” ನಾರಾಯಣಸ್ವಾಮಿ ತಿಳಿಸಿದರು.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ