ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ ಅಮರಗೋಳದ ಹೊರವಲಯದ ಹಳ್ಳವು ತುಂಬಿ ಉಕ್ಕಿ ಹರಿದಿದ್ದರಿಂದ ಸಮೀಪದ ಸರ್ಕಾರಿ ಪ್ರೌಢಶಾಲೆಯು ಜಲಾವೃತಗೊಂಡಿತು. ಹೀಗಾಗಿ ಸುಮಾರು 130ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಆರು ಶಿಕ್ಷಕರು ಮೂರೂವರೆ ತಾಸು ಹೊರಬರಲಾಗದೆ ಸಿಲುಕಿ ಪರದಾಡಿದರು.
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಗುರುವಾರ ಸಂಜೆ 4:30ರ ಸುಮಾರಿಗೆ ಅರ್ಧ ತಾಸು ಸುರಿದ ಮಳೆಗೆ, ಶಾಲೆಯಿಂದ ಅನತಿ ದೂರದಲ್ಲಿ ಹರಿಯುವ ಹಳ್ಳದ ನೀರು ಶಾಲೆ ಕಟ್ಟಡವನ್ನು ಆವರಿಸಿತು. ನೀರನ ಪ್ರಮಾಣ ಹೆಚ್ಚಾಗಿದ್ದರಿಂದ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಹೊರಬರಲು ಸಾಧ್ಯವಾಗಲಿಲ್ಲ. ರಾತ್ರಿ 8ರ ಸುಮಾರಿಗೆ ನೀರಿನ ಪ್ರಮಾಣ ತಗ್ಗಿದ ಬಳಿಕ ಟ್ರಾಕ್ಟರ್ನಲ್ಲಿ ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲಾಯಿತು. ಗ್ರಾಮದ ಹೊರವಲಯದಲ್ಲಿ ನಿರ್ಮಿಸಿದ್ದ ಶಾಲೆಯ ನೂತನ ಕಟ್ಟಡವನ್ನು ನಾಲ್ಕು ತಿಂಗಳ ಹಿಂದೆಯಷ್ಟೇ ಉದ್ಘಾಟನೆಗೊಂಡಿತ್ತು. ಪ್ರಸಕ್ತ ಸಾಲಿನಿಂದ ಅಲ್ಲಿ ತರಗತಿಗಳು ಆರಂಭಗೊಂಡಿತ್ತು.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement
ನಿಮ್ಮ ಕಾಮೆಂಟ್ ಬರೆಯಿರಿ