ಡಿನೋಟಿಫಿಕೇಷನ್ ಪ್ರಕರಣ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಯಡಿಯೂರಪ್ಪ

ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.
ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ ಸ್ವಾಧೀನ ಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿ-ನೋಟಿಫೈ ಮಾಡಲಾಗಿದೆ ಎಂಬ ಪ್ರಕರಣದ ಆರೋಪಿಯಾಗಿರುವ ಯಡಿಯೂರಪ್ಪ ಅವರು ವಕೀಲ ಸಿ ವಿ ನಾಗೇಶ ಜೊತೆ ಬಂದು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಧೀಶ ಬಿ ಜಯಂತಕುಮಾರ್ ಅವರು, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ದೂರುದಾರರ ಪರ ವಕೀಲರಿಗೆ ಸೂಚಿಸಿದರು. ದೂರುದಾರರ ವಕೀಲ ಕೆವಿ ಧನಂಜಯ ಅವರು ಜಾಮೀನು ಅರ್ಜಿ ಪರಿಶೀಲಿಸಿದ ನಂತರ ಪ್ರತಿಕ್ರಿಯೆ ಸಲ್ಲಿಸುವುದಾಗಿ ಕೋರ್ಟಿಗೆ ತಿಳಿಸಿದ್ದಾರೆ.ಇದನ್ನು ಮಾನ್ಯ ಮಾಡಿದ ನ್ಯಾಯಧೀಶರು ವಿಚಾರಣೆಯನ್ನು ಶನಿವಾರ ಜೂ.18ಕ್ಕೆ ಮುಂದೂಡಿದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement