ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ನಾಗೇಶ

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶವನ್ನು ನಾಳೆ, ಶನಿವಾರ (ಜೂನ್ 18) ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ.
ಈ ಕುರಿತು ಶಿಕ್ಷಣ ಸಚಿವರು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್ 18) ಪ್ರಕಟಿಸಲಾಗುತ್ತದೆ.ವಿದ್ಯಾರ್ಥಿಗಳಿಗೆ ಶುಭಾಶಯಗಳು’ ಎಂದು ಬರೆದಿದ್ದಾರೆ.

ಶನಿವಾರ (ಜೂನ್ 18) ಬೆಳಿಗ್ಗೆ 11 ಗಂಟೆಗೆ ಪಿಯು ಮಂಡಳಿ ಕಚೇರಿಯಲ್ಲಿ ಸಚಿವ ಬಿ.ಸಿ. ನಾಗೇಶ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದು, ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ದ್ವಿತೀಯ ಪಿಯು ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ www.karresult.nic.in ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement