ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರು ಸ್ಪರ್ಧಿಸುವುದಿಲ್ಲ: ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಸಂಜೆ ಕರೆದಿದ್ದ ಸಭೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ ಎಂದು ತಿಳಿಸಿದ್ದಾರೆ.

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು. 17 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಆ ಸಭೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಜೂನ್ 20ರಂದು ಮತ್ತೊಂದು ಸುತ್ತಿನ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ ಎಂದರು.
ದೇವೇಗೌಡರಿಗೆ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಸ್ವತಂತ್ರ ಸರಕಾರ ಬರಬೇಕು ಎಂಬ ಆಸೆಯಿದೆ. ಅವರ ಈ ಆಸೆ ಪೂರೈಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ರಾಷ್ಟ್ರಪತಿ ಹುದ್ದೆಯ ಬಗ್ಗೆ ದೇವೇಗೌಡರ ಒಲವು ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement