ಡಿನೋಟಿಫಿಕೇಷನ್ ಪ್ರಕರಣ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಯಡಿಯೂರಪ್ಪ

ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು. ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ ಸ್ವಾಧೀನ ಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿ-ನೋಟಿಫೈ ಮಾಡಲಾಗಿದೆ ಎಂಬ ಪ್ರಕರಣದ ಆರೋಪಿಯಾಗಿರುವ ಯಡಿಯೂರಪ್ಪ ಅವರು ವಕೀಲ ಸಿ ವಿ ನಾಗೇಶ … Continued

ಚಿರಾಪುಂಜಿಯಲ್ಲಿ ಒಂದೇ ದಿನಕ್ಕೆ ಸುರಿದ 972 ಮಿಮೀ ಮಳೆ…! 27 ವರ್ಷಗಳಲ್ಲೇ ಜೂನ್‌ನಲ್ಲಿ ಸುರಿದ ಅತಿ ಹೆಚ್ಚು ಮಳೆ

ಒಂದು ದಿನದಲ್ಲಿ 811.6 ಮಿಮೀ ಮಳೆಯನ್ನು ದಾಖಲಿಸಿದ ಕೇವಲ ಎರಡು ದಿನಗಳ ನಂತರ, ಮೇಘಾಲಯದ ಚಿರಾಪುಂಜಿಯಲ್ಲಿ ಶುಕ್ರವಾರ ಬೆಳಿಗ್ಗೆ 8:30 ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ 972 ಮಿಮೀ ಮಳೆ ಸುರಿದಿದೆ. ಇದು 1995ರ ನಂತರ ಜೂನ್‌ ತಿಂಗಳಲ್ಲಿ ೊಂದು ದಿನದಲ್ಲಿ ಸುರಿದ ಅತಿ ಹೆಚ್ಚು ಮಳೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. … Continued

ತಾಲಿಬಾನ್ ಆಳ್ವಿಕೆಯ ಅಫ್ಘಾನಿಸ್ತಾನದಲ್ಲಿ ಟಿವಿ ನಿರೂಪಕ ಈಗ ಬೀದಿ ಬದಿ ತಿನಿಸು ಮಾರಾಟ ಮಾಡ್ತಾರೆ….!

ತಾಲಿಬಾನ್ ಆಳ್ವಿಕೆಯ ಅಫ್ಘಾನಿಸ್ತಾನದಲ್ಲಿ ಅಫ್ಘಾನಿಸ್ತಾನದ ಖ್ಯಾತ ಟಿವಿ ಆ್ಯಂಕರ್ ಒಬ್ಬರು ಈಗ ಬೀದಿಗಳಲ್ಲಿ ಆಹಾರವನ್ನು ಮಾರಾಟ ಮಾಡುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಹಿಂದೆ ಹಮೀದ್ ಕರ್ಜಾಯ್ ಸರ್ಕಾರದೊಂದಿಗೆ ಕೆಲಸ ಮಾಡಿದ ಕಬೀರ್ ಹಕ್ಮಲ್ ಅವರು ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಮಾಧ್ಯಮ ನಿರೂಪಕರಾಗಿದ್ದ ಮೂಸಾ ಮೊಹಮ್ಮದಿ ಅವರು ಈಗ ಜೀವನೋಪಾಯಕ್ಕಾಗಿ ಬೀದಿಯಲ್ಲಿ ತಿನಿಸು … Continued

ಸೋನಿಯಾ ಗಾಂಧಿಗೆ ಕೋವಿಡ್ -19 ನಂತರದ ನಂತರದ ಶ್ವಾಸನಾಳದ ಸೋಂಕು ಚಿಕಿತ್ಸೆ ಮುಂದುವರಿಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್ -19 ಸೋಂಕಿನ ನಂತರ ತಮ್ಮ ಶ್ವಾಸನಾಳದ ಸೋಂಕಿಗೆ ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ  ಹಾಗೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪಕ್ಷ ತಿಳಿಸಿದೆ. ಅವರನ್ನು ತಕ್ಷಣವೇ ಚಿಕಿತ್ಸೆಗೆ ಒಳಪಡಿಸಲಾಯಿತು ಮತ್ತು ನಿನ್ನೆ (ಗುರುವಾರ) ಬೆಳಿಗ್ಗೆ ಸಂಬಂಧಿತ ಅನುಸರಣಾ ಚಿಕಿತ್ಸೆ ಕಾರ್ಯವಿಧಾನಕ್ಕೆ ಒಳಗಾದರು” ಎಂದು ಅಖಿಲ … Continued

ಸಿದ್ದರಾಮಯ್ಯ ವಿರುದ್ಧ ಜಾತಿನಿಂದನೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಭರದಲ್ಲಿ ನನ್ನ ಮೇಲೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಎಸ್.ಸಿ. ಮೋರ್ಚಾ ವತಿಯಿಂದ ಇಂದು, ಶುಕ್ರವಾರ ಹೈಗ್ರೌಂಡ್ಸ್ ಪೊಲೀಸ್ … Continued

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ನಾಗೇಶ

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶವನ್ನು ನಾಳೆ, ಶನಿವಾರ (ಜೂನ್ 18) ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. ಈ ಕುರಿತು ಶಿಕ್ಷಣ ಸಚಿವರು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್ 18) ಪ್ರಕಟಿಸಲಾಗುತ್ತದೆ.ವಿದ್ಯಾರ್ಥಿಗಳಿಗೆ ಶುಭಾಶಯಗಳು’ ಎಂದು ಬರೆದಿದ್ದಾರೆ. … Continued

ಅಗ್ನಿಪಥ ವಿರೋಧಿಸಿ ಪ್ರತಿಭಟನೆ: ಈವರೆಗೆ 200 ರೈಲುಗಳ ಮೇಲೆ ಪರಿಣಾಮ, 35 ರೈಲುಗಳು ರದ್ದು- ರೈಲ್ವೆ ಇಲಾಖೆ

ನವದೆಹಲಿ: ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿಪಥ ಯೋಜನೆ ವಿರುದ್ಧದ ಪ್ರತಿಭಟನೆ ಇದುವರೆಗೆ 200 ಕ್ಕೂ ಹೆಚ್ಚು ರೈಲುಗಳ ಮೇಲೆ ಪರಿಣಾಮ ಬೀರಿದೆ ಎಂದು ರೈಲ್ವೆ ಶುಕ್ರವಾರ ತಿಳಿಸಿದೆ. ಬುಧವಾರ ಪ್ರತಿಭಟನೆಗಳು ಭುಗಿಲೆದ್ದ ನಂತರ ಸುಮಾರು 35 ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು 13 ಅಲ್ಪಾವಧಿ ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ. ಬಿಹಾರ, ಜಾರ್ಖಂಡ್ ಮತ್ತು ಉತ್ತರ … Continued

ಅಗ್ನಿಪಥ ಯೋಜನೆ: ಈ ವರ್ಷದ ಸೇನಾ ನೇಮಕಾತಿ ವಯಸ್ಸಿನ ಮಿತಿ 21 ರಿಂದ 23ಕ್ಕೆ ಹೆಚ್ಚಿಸಿದ ಸರ್ಕಾರ

ನವದೆಹಲಿ: ಅಗ್ನಿಪಥ ಯೋಜನೆಯಡಿ ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು ಕೇಂದ್ರ ಸರ್ಕಾರ 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸಿದೆ. ಮಂಗಳವಾರ ಅಗ್ನಿಪಥ ಯೋಜನೆಯನ್ನು ಘೋಷಿಸುವಾಗ, 17.5 ಮತ್ತು 21 ವರ್ಷದೊಳಗಿನ ನಾಗರಿಕರು ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ “ಟೂರ್ ಆಫ್ ಡ್ಯೂಟಿ” ಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಸರ್ಕಾರ ಹೇಳಿತ್ತು. ಟೂರ್ … Continued

ಬಿಹಾರ, ಉತ್ತರ ಪ್ರದೇಶದ ನಂತರ ತೆಲಂಗಾಣಕ್ಕೆ ಹರಡಿದ ಅಗ್ನಿಪಥ ವಿರೋಧಿ ಪ್ರತಿಭಟನೆ ; ಸಿಕಂದರಾಬಾದ್‌ನಲ್ಲಿ ಪೊಲೀಸರ ಗುಂಡಿನ ದಾಳಿಗೆ ಓರ್ವ ಸಾವು

ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗೆ ಕಾರಣವಾದ ಸರ್ಕಾರದ ಹೊಸ ನೇಮಕಾತಿ ಯೋಜನೆ ಅಗ್ನಿಪಥ ಈಗ ಹೈದರಾಬಾದ್‌ಗೆ ವ್ಯಾಪಿಸಿದೆ, ಪ್ರತಿಭಟನಾಕಾರರು ಶುಕ್ರವಾರ ಬೆಳಿಗ್ಗೆ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಕನಿಷ್ಠ ಏಳು ರೈಲುಗಳಿಗೆ ಬೆಂಕಿ ಹಚ್ಚಿ ಇಡೀ ರೈಲ್ವೆ ನಿಲ್ದಾಣದ ಆವರಣವನ್ನು ದೋಚಿದ್ದಾರೆ. ಶುಕ್ರವಾರ ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ಅಗ್ನಿಪಥ್ ಪ್ರತಿಭಟನಾಕಾರರ ಮೇಲೆ ರೈಲ್ವೆ ಪೊಲೀಸರು ಗುಂಡಿನ … Continued

ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್ ಸಹೋದರ ಅಗ್ರಸೇನ ಗೆಹ್ಲೋಟ್ ನಿವಾಸದ ಮೇಲೆ ಸಿಬಿಐ ದಾಳಿ

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳವು ದಾಳಿ ನಡೆಸಿದೆ. ಅಗ್ರಸೇನ ಗೆಹ್ಲೋಟ್ ರಸಗೊಬ್ಬರ ವ್ಯಾಪಾರಿಯಾಗಿದ್ದು, ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸಲಾಗಿತ್ತು. ರಾಹುಲ್ ಗಾಂಧಿ ವಿರುದ್ಧದ ಇಡಿ ತನಿಖೆಗೆ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ನಡುವೆ … Continued