ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕರ ಪಟ್ಟಿ ಘೋಷಣೆ ಮಾಡುವ ಭಾರತ, ಅಮೆರಿಕ ಕ್ರಮಕ್ಕೆ ಚೀನಾ ತಡೆ

ವಿಶ್ವಸಂಸ್ಥೆ: ಪಾಕಿಸ್ತಾನ ಮೂಲದ ಭಯೋತ್ಪಾದಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ವಿಶ್ವಸಂಸ್ಥೆಯ ಐಸಿಸ್ ಮತ್ತು ಅಲ್ ಖೈದಾ ನಿರ್ಬಂಧಗಳ ಸಮಿತಿಯಡಿ ‘ಜಾಗತಿಕ ಭಯೋತ್ಪಾದಕ’ ಎಂದು ಪಟ್ಟಿ ಮಾಡುವಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಮತ್ತು ಅಮೆರಿಕದ ಜಂಟಿ ಪ್ರಸ್ತಾವನೆಗೆ ಚೀನಾ ಕೊನೆಯ ಕ್ಷಣದಲ್ಲಿ ತಡೆಯೊಡ್ಡಿದೆ. ಮಕ್ಕಿ ಅಮೆರಿಕದಿಂದ ಗೊತ್ತುಪಡಿಸಿದ ಭಯೋತ್ಪಾದಕ ಮತ್ತು ಲಷ್ಕರ್-ಎ-ತೈಬಾ (ಎಲ್‌ಇಟಿ) ಮುಖ್ಯಸ್ಥ ಮತ್ತು … Continued

ನೋ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ ವಾಹನಗಳ ಚಿತ್ರ ಕಳುಹಿಸಿದರೆ ಸರ್ಕಾರದಿಂದ 500 ರೂ. ಬಹುಮಾನ ನೀಡ್ತಾರಂತೆ..!

ನವದೆಹಲಿ: ರಸ್ತೆಗಳಲ್ಲಿ ತಪ್ಪಾಗಿ ನಿಲ್ಲಿಸಿದ ವಾಹನದ ಚಿತ್ರವನ್ನು ನೀವು ಕಳುಹಿಸಿದರೆ ಶೀಘ್ರದಲ್ಲೇ ಸರ್ಕಾರ ನಿಮಗೆ 500 ರೂಪಾಯಿಗಳ ಬಹುಮಾನ ನೀಡಬಹುದು…! ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಕಾರ್ಯಕ್ರಮವೊಂದರಲ್ಲಿ ಪಾರ್ಕಿಂಗ್‌ ಇಲ್ಲದ ಸ್ಥಳದಲ್ಲಿ ಅನುಚಿತವಾಗಿ ನಿಲುಗಡೆ ಮಾಡಿದ ವಾಹನಗಳನ್ನು ವರದಿ ಮಾಡಲು ಬಳಕೆದಾರರನ್ನು ಪ್ರೋತ್ಸಾಹಿಸುವ ಕಾನೂನನ್ನು ತರಲು ಸರ್ಕಾರ ಯೋಜಿಸುತ್ತಿದೆ … Continued

ಚಿತ್ರದುರ್ಗ: ಚಿಟುಗು ಮಲ್ಲೇಶ್ವರ ಮಠದ ಸ್ವಾಮೀಜಿ ನಿಧನ

ಚಿತ್ರದುರ್ಗ : ವಿಶ್ವಕರ್ಮ ಸಮಾಜದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಜ್ಞಾನಭಾಸ್ಕರ ಸ್ವಾಮೀಜಿ(75) ಇಂದು, ಶುಕ್ರವಾರ ಮಠದ ಸ್ನಾನದ ಗೃಹದಲ್ಲಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿನ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನದ ಸ್ವಾಮೀಜಿ ಆಗಿದ್ದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾ ಮಠದಲ್ಲಿ ಇಂದು, ಶುಕ್ರವಾರ ಬೆಳಗ್ಗೆ ಸ್ನಾನದ ಗೃಹದಲ್ಲಿ ಅವರ ಮೃತದೇಹ … Continued

ಹುಬ್ಬಳ್ಳಿ: ಮಳೆಗೆ ಶಾಲೆ ಜಲಾವೃತ, ಮೂರು ತಾಸು ಶಾಲೆಯೊಳಗೆ ಸಿಲುಕಿದ ವಿದ್ಯಾರ್ಥಿಗಳು

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ ಅಮರಗೋಳದ ಹೊರವಲಯದ ಹಳ್ಳವು ತುಂಬಿ ಉಕ್ಕಿ ಹರಿದಿದ್ದರಿಂದ ಸಮೀಪದ ಸರ್ಕಾರಿ ಪ್ರೌಢಶಾಲೆಯು ಜಲಾವೃತಗೊಂಡಿತು. ಹೀಗಾಗಿ ಸುಮಾರು 130ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಆರು ಶಿಕ್ಷಕರು ಮೂರೂವರೆ ತಾಸು ಹೊರಬರಲಾಗದೆ ಸಿಲುಕಿ ಪರದಾಡಿದರು. ಗುರುವಾರ ಸಂಜೆ 4:30ರ ಸುಮಾರಿಗೆ ಅರ್ಧ ತಾಸು ಸುರಿದ ಮಳೆಗೆ, … Continued

ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್‌ : ರಾಜ್ಯದ 80 ಕಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ 21 ಅಧಿಕಾರಿಗಳ ಮೇಲೆ ಶುಕ್ರವಾರ ಬೆಳ್ಳಂಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿದ್ದು, 80 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ 21 ಜನರ ವಿರುದ್ಧ ಮೊಕದ್ದಮೆ ದಾಖಲಿಸಿದ್ದು, ಆರೋಪಿತರ ಮನೆ, ಕಚೇರಿಗಳು, ಅವರ ಸಂಬಂಧಿಕರು ಮತ್ತು ಆಪ್ತರ ಮನೆಗಳ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ : ವೈಐ-ಎಜೆಎಲ್ ಸ್ವಾಧೀನ ಒಪ್ಪಂದ ಸಂಪೂರ್ಣ ನಿರ್ವಹಿಸಿದ್ದು ದಿವಂಗತ ಮೋತಿಲಾಲ್ ವೋರಾ ಎಂದು ಇಡಿಗೆ ತಿಳಿಸಿದ ರಾಹುಲ್ ಗಾಂಧಿ ; ಇಡಿ ಮೂಲಗಳು

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ಯಿಂದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಸ್ವಾಧೀನದ ಸಂಪೂರ್ಣ ವಹಿವಾಟಿನ ಹೊಣೆಯನ್ನು ಕಾಂಗ್ರೆಸ್ ಮಾಜಿ ಖಜಾಂಚಿ ದಿವಂಗತ ಮೋತಿಲಾಲ್ ವೋರಾ ಮೇಲೆ ಹೊರಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೂಲಗಳು ತಿಳಿಸಿವೆ. ಯಂಗ್ ಇಂಡಿಯನ್ಸ್ ಅಸೋಸಿಯೇಟೆಡ್ ಜರ್ನಲ್ಸ್ … Continued