ಜೂನ್‌ 21ರಂದು ಪ್ರಧಾನಿ ಮೋದಿ ಜೊತೆ ವೇದಿಕೆಯಲ್ಲಿ ಯೋಗ ಮಾಡಲು ಮೈಸೂರು ರಾಜವಂಶಸ್ಥ ಯದುವೀರ್‌ಗೆ ಆಹ್ವಾನ, ಅರಮನೆ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ

ಮೈಸೂರು: 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವೇಳೆ ಅರಮನೆ ಆವರಣದಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪಾಲ್ಗೊಳ್ಳಲು ಮೈಸೂರು ರಾಜವಂಶಸ್ಥರಿಗೆ ಆಹ್ವಾನ ನೀಡಲಾಗಿದೆ.
ಜೂನ್‌ 21ರಂದು ಮೈಸೂರಿನ ಅರಮನೆ ಆವರಣದಲ್ಲಿ ನಡೆಯುವ ವಿಶ್ವಯೋಗ ದಿನದಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ವೇದಿಕೆಯ ಕಾರ್ಯಕ್ರಮದಲ್ಲಿ ಮೈಸೂರಿನ ರಾಜವಂಶಸ್ಥರಿಗೆ ಆಹ್ವಾನ ನೀಡಲಾಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ಇಂದು, ಶನಿವಾರ ತಿಳಿಸಿದ್ದಾರೆ.
ಪ್ರಮೋದದೇವಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಉಪಹಾರ ಸೇವಿಸಲು ಅವರ ಮನೆಗೆ ತೆರಳಲಿದ್ದಾರೆ ಎಂದೂ ತಿಳಿಸಿದ್ದಾರೆ

ಅರಮನೆಯ ಯೋಗ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯದುವೀರ್ ವೇದಿಕೆ ಹಂಚಿಕೊಳ್ಳಲಿದ್ದಾರೆ. ಮುಖ್ಯಮಂತ್ರಿ, ರಾಜ್ಯಪಾಲರು, ಜಿಲ್ಲಾ ಉಸ್ತುವಾರಿ ಸಚಿವರು, ಕೇಂದ್ರ ಆಯುಷ್ ಸಚಿವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೂ ವೇದಿಕೆಯ ಯೋಗಾಭ್ಯಾಸದಲ್ಲಿ ಭಾಗಿಯಾಗಲಿದ್ದಾರೆ.
ಯೋಗಾಭ್ಯಾಸದ ನಂತರ ಮೈಸೂರು ಅರಮನೆಯಲ್ಲಿ ಬ್ರೇಕ್ ಫಾಸ್ಟ್ ಇರಲಿದೆ. ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಆಹ್ವಾನದ ಮೇರೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಸುಮಾರು ಒಂದು ಗಂಟೆಗಳ ಕಾಲ ಅರಮನೆಯಲ್ಲಿ ರಾಜವಂಶಸ್ಥರ ಜೊತೆ ಮೋದಿ ಮಾತುಕತೆ ನಡೆಸಲಿದ್ದಾರೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

ಅರಮನೆ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ
ಜೂನ್‌ 21 ರಂದು ಮೈಸೂರಿನ ಅರಮನೆ ಆವರಣದಲ್ಲಿ ವಿಶ್ವಯೋಗ ದಿನಾಚರಣೆಯನ್ನು ಏರ್ಪಡಿಸಿರುವ ಹಿನ್ನೆಲೆಯಲ್ಲಿ ನಾಳೆಯಿಂದ (ಜೂನ್‌-19) 21 ಜೂನ್‌ ಮಧ್ಯಾಹ್ನ 12 ಗಂಟೆಗಳ ವರೆಗೆ ಅರಮನೆಯ ಪ್ರವೇಶವನ್ನು ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಜೊತೆಗೆ ಅರಮನೆ ಆವರಣದಲ್ಲಿ ನಡೆಯುವ ಬೆಳಕು ಮತ್ತು ಧ್ವನಿ ಕಾರ್ಯಕ್ರಮಗಳನ್ನು ಇಂದಿನಿಂದ (ಜೂನ್‌ 18) 22 ರ ವರೆಗೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement