ಬೆಂಗಳೂರು: ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು, ಶನಿವಾರ ಜಾಮೀನು ಮಂಜೂರು ಮಾಡಿದೆ.
ಬೆಳ್ಳಂದೂರು ನಿವಾಸಿ ವಾಸುದೇವ ರೆಡ್ಡಿ ದೂರಿನ ಮೇರೆಗೆ ದಾಖಲಾಗಿರುವ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತು.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಕೆ ವಿ ಧನಂಜಯ ಅವರು “ಜಾಮೀನಿಗೆ ನಮ್ಮ ವಿರೋಧವಿಲ್ಲ. ಆದರೆ, ಜಾಮೀನು ಮಂಜೂರು ಮಾಡುವುದಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸಿರುವ ಕೆಲವು ಹೇಳಿಕೆಗಳಿಗೆ ನಮ್ಮ ಆಕ್ಷೇಪವಿದೆ” ಎಂದರು.
ಆಕ್ಷೇಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಯಡಿಯೂರಪ್ಪ ಅವರು ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಕೋರಿ ತಮ್ಮ ವಕೀಲ ಸಿ.ವಿ.ನಾಗೇಶ ಮೂಲಕ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧ ಮಾಡಲಾಗಿರುವ ಇಡೀ ಆರೋಪವು ದೋಷಪೂರಿತವಾದ, ತಿರುಚಲಾದ, ಕಟ್ಟುಕತೆಯಾಗಿದೆ. ದೂರುದಾರರು ಆರೋಪಿಸಿರುವಂತೆ ಯಾವುದೇ ಸಂದರ್ಭದಲ್ಲಿ ಯಡಿಯೂರಪ್ಪನವರು ಅಪರಾಧದಲ್ಲಿ ಭಾಗಿಯಾಗಿಲ್ಲ. ತಪ್ಪಾಗಿ ಯಡಿಯೂರಪ್ಪನವರನ್ನು ದೂರಿನಲ್ಲಿ ಸೇರ್ಪಡೆ ಮಾಡಲಾಗಿದೆ. ಯಡಿಯೂರಪ್ಪ ಅವರು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್ 13(1)(ಡಿ) ಅಡಿ ಅಪರಾಧ ಎಸಗಿರುವುದಕ್ಕೆ ಯಾವುದೇ ದಾಖಲೆಗಳು ಇಲ್ಲ. ಅಲ್ಲದೇ, ಆರೋಪಿಸಲಾಗಿರುವ ಅಪರಾಧವು ಜೀವಾವಧಿ ಅಥವಾ ಮರಣ ದಂಡನೆ ವಿಧಿಸುವ ಶಿಕ್ಷೆ ಒಳಗೊಂಡಿಲ್ಲ. ಹೀಗಾಗಿ, ನ್ಯಾಯಾಲಯ ವಿಧಿಸುವ ಷರತ್ತುಗಳನ್ನು ಪೂರೈಸಲು ಸಿದ್ಧವಾಗಿರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಜಯಂತಕುಮಾರ ಅವರು ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ದೂರುದಾರರ ಪರ ವಕೀಲರಿಗೆ ಸೂಚಿಸಿದ್ದರು.
ಏನಿದು ಪ್ರಕರಣ?
ಮಾಹಿತಿ ತಂತ್ರಜ್ಞಾನ (ಐಟಿ) ಕಾರಿಡಾರ್ ನಿರ್ಮಾಣಕ್ಕಾಗಿ ಬೆಂಗಳೂರಿನ ಬೆಳ್ಳಂದೂರು ಮತ್ತು ದೇವರ ಬೀಸನಹಳ್ಳಿಯಲ್ಲಿ ಸ್ವಾಧೀನ ಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿ-ನೋಟಿಫೈ ಮಾಡಿದ ಆರೋಪವನ್ನು ಯಡಿಯೂರಪ್ಪ ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೈಗಾರಿಕಾ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ, ಯಡಿಯೂರಪ್ಪ ಸೇರಿದಂತೆ 10 ಜನರ ವಿರುದ್ಧ ಬೆಂಗಳೂರಿನ ನಿವಾಸಿ ವಾಸುದೇವ ರೆಡ್ಡಿ ಎಂಬವರು 2013ರಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ