ದ್ವಿತೀಯ ಪಿಯು ಫಲಿತಾಂಶ ‌ಪ್ರಕಟ: 61.88% ವಿದ್ಯಾರ್ಥಿಗಳು ತೇರ್ಗಡೆ, ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

posted in: ರಾಜ್ಯ | 0

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ‌ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ 61.88% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ.ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶನಿವಾರ ಬೆಳಗ್ಗೆ 11.30ಕ್ಕೆ ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಇಂದು, ಶನಿವಾರ ಫಲಿತಾಂಶ ಪ್ರಕಟಿಸಿದ್ದಾರೆ.

advertisement

ಈ ವೇಳೆ ಮಾತನಾಡಿದ ಅವರು, ಮಕ್ಕಳು ನಿರೀಕ್ಷೆಗಿಂತ ಚೆನ್ನಾಗಿ ಮಾಡಿದ್ದಾರೆ. ಕೋವಿಡ್ ಮಧ್ಯೆ ಉತ್ತಮವಾಗಿ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಮಕ್ಕಳು ಸ್ಪೋಟೀವ್ ಆಗಿ ಫಲಿತಾಂಶ ತೆಗೆದುಕೊಳ್ಳಬೇಕು. ಇಂದು, ಶನಿವಾರ ಮಧ್ಯಾಹ್ನ 12 ಗಂಟೆ ನಂತರ https://pue.karnataka.gov.in/ ವೆಬ್​ಸೈಟ್​ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿರುವ ಮೊಬೈಲ್​ ಸಂಖ್ಯೆಗೂ ಫಲಿತಾಂಶದ ಸಂದೇಶ ಕಳುಹಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

81 ಮೌಲ್ಯಮಾಪನ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. ಒಟ್ಟು 5,99,794 ಹೊಸ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 61838 ರಿಪೀಟರ್ಸ್‌ಗಳಲ್ಲಿ 14,403 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನುಳಿದಂತೆ 21,931 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, 5,866 ಮಂದಿ ಪಾಸ್ ಆಗಿದ್ದಾರೆ.

ಓದಿರಿ :-   ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ದತ್ತಾತ್ರೇಯ ಹೊಸಬಾಳೆ ಸಿದ್ದರಾಮಯ್ಯ ಸೇರಿ ಹಲವರ ಸಂತಾಪ

ಒಟ್ಟಾರೆ 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ವಿಜ್ಞಾನ ವಿದ್ಯಾರ್ಥಿಗಳೇ ಹೆಚ್ಚು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ.48.71, ವಾಣಿಜ್ಯ ವಿಭಾಗದಲ್ಲಿ ಶೇ.64.97, ವಿಜ್ಞಾನ ವಿಭಾಗದಲ್ಲಿ ಶೇ.72.53 ಫಲಿತಾಂಶ ಬಂದಿದೆ ಎಂದು ತಿಳಿಸಿದರು.

ಗಣಿತದಲ್ಲಿ 14,200 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ತೆಗೆದಿದ್ದಾರೆ. ಇಂಗ್ಲಿಷ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದರೆ ಕನ್ನಡದಲ್ಲಿ 563 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದಾರೆ.ಈ ಬಾರಿ ಗ್ರಾಮಾಂತರ ಪ್ರದೇಶದಲ್ಲಿ ಉತ್ತಮ ಫಲಿತಾಂಶ ಬಂದಿದೆ. ನಗರ ಪ್ರದೇಶಗಳಲ್ಲಿ 61.78 ರಷ್ಟು ಫಲಿತಾಂಶ ಬಂದರೆ, ಗ್ರಾಮಾಂತರ ಪ್ರದೇಶದಲ್ಲಿ 62.18 ರಷ್ಟು ಫಲಿತಾಂಶ ಬಂದಿದೆ ಎಂದರು.

ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಣಕನ್ನಡ ಜಿಲ್ಲೆ (ಶೇ.88.02) ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆ 2ನೇ ಸ್ಥಾನ ಪಡೆದುಕೊಂಡಿದ್ದು, ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಣ 4ನೇ ಸ್ಥಾನ ಹಾಗೂ ಉತ್ತರ ಕನ್ನಡ 5ನೇ ಸ್ಥಾನ ಪಡೆದುಕೊಂಡಿದೆ. ಚಿತ್ರದುರ್ಗ ಜಿಲ್ಲೆ (ಶೇ.49.31) ಕೊನೆಯ ಸ್ಥಾನ ಪಡೆದುಕೊಂಡಿದೆ.

ಓದಿರಿ :-   'ಅಸಾಧಾರಣ' ಗಾಯಕ, ಕನ್ನಡದ ಮನೆ ಮಾತಾಗಿದ್ದರು : ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಸರ್ಕಾರಿ ಕಾಲೇಜುಗಳಲ್ಲಿ 52.84% ಫಲಿತಾಂಶ ಬಂದಿದ್ದು, ಅನುದಾನಿತ ಕಾಲೇಜು 62.05% ಹಾಗೂ ಖಾಸಗಿ ಕಾಲೇಜುಗಳು 76.50% ಫಲಿತಾಂಶ ಪಡೆದುಕೊಂಡಿವೆ. ಇನ್ನುಳಿದಂತೆ ಕಾರ್ಪೊರೇಷನ್ ಕಾಲೇಜು 55.72% ಫಲಿತಾಂಶ ಪಡೆದುಕೊಂಡಿದೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಜೂನ್ 30 ಕೊನೆ ದಿನವಾಗಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಜುಲೈ 13 ಕೊನೆ ದಿನವಾಗಿದೆ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement