ಧಾರವಾಡ: ರಾಜ್ಯದಲ್ಲೂ ಅಗ್ನಿಪಥ ಸೇನಾ ನೇಮಕಾತಿ ಯೋಜನೆ ವಿರೋಧಿಸಿದ ಪ್ರತಿಭಟನೆ ಆರಂಭಗೊಂಡಿದೆ. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು,ಶನಿವಾರ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಧಾರವಾಡದ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಅಗ್ನಿಪಥ ಯೋಜನೆ ಜಾರಿ ವಿರೋಧಿಸಿ, ಯುವಕರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಅಗ್ನಿಪಥ ಯೋಜನೆ ಕೈಬಿಡುವಂತೆ ಒತ್ತಾಯಿಸಿದರು.

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಮನವಿ ನೀಡಿದ ಬಳಿಕ ಪೊಲೀಸರು ಯುವಕರಿಗೆ ಪ್ರತಿಭಟನೆ ಕೈಬಿಡುವಂತೆ ಸೂಚಿಸಿದರು. ಆದರೆ ಪೊಲೀಸರ ಮನವಿಗೆ ಕಿವಿಗೊಡದೆ ಪ್ರತಿಭಟನೆ ನಡೆಸಲು ನೂರಾರು ಯುವಕರು ಕಲಾಭವನ ಮೈದಾನಕ್ಕೆ ತೆರಳಲು ಆರಂಭಿಸಿದರು.. ಕಲಾಭವನ ಮೈದಾನಕ್ಕೆ ಹೋಗಿ ಪ್ರತಿಭಟನೆ ನಡೆಸುವುದಾಗಿ ಪಟ್ಟು ಹಿಡಿದರು. ಈ ವೇಳೆ ತಳ್ಳಾಟ, ನೂಕಾಟ ಉಂಟಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ, ಪೊಲೀಸರು ಲಾಠಿ ಪ್ರಹಾರ ನಡೆಸಿ, ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಪೊಲೀಸರು ಹಲವರನ್ನ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕೆಲವರನ್ನು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ವಶಕ್ಕೆ ಪಡೆಯುತ್ತಿದ್ದಂತೆ ಪ್ರತಿಭಟನಾಕಾರರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ