ಮಾಜಿ ಶಿಕ್ಷಣ ಸಚಿವ ಎಂ.ರಘುಪತಿ ನಿಧನ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಎಂ.ರಘುಪತಿ ಅವರು ಶನಿವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಘುಪತಿ ಅವರು, ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು, ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

advertisement

ಮಲ್ಲೇಶ್ವರಂನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ. ಇವರು ಮಲ್ಲೇಶ್ವರಂ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂ. ರಘುಪತಿ ಅವರು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಶಾಲೆಗಳಲ್ಲಿ ಮೊದಲ ಬಾರಿಗೆ ಸಮವಸ್ತ್ರ ಪರಿಚಯಿಸಿದ ಹೆಗ್ಗಳಿಕೆ ರಘುಪತಿ ಅವರದ್ದು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಎಂ. ರಘುಪತಿ ಅಗಲಿಕೆಗೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಬೆಳಗಾವಿ ಐಟಿಬಿಪಿ ಶಿಬಿರದಲ್ಲಿ ಎಕೆ-47 ರೈಫಲ್​ಗಳ ಕಳ್ಳತನ

ನಿಮ್ಮ ಕಾಮೆಂಟ್ ಬರೆಯಿರಿ

advertisement