ವೇದಿಕೆ ಮೇಲೆಯೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಹಾಕಿದ ಡಿಕೆಶಿ

posted in: ರಾಜ್ಯ | 0

ಬೆಂಗಳೂರು: ಶಾಲಾ ಪಠ್ಯಪುಸ್ತಕ ವಿವಾದದ ಹಿನ್ನಲೆಯಲ್ಲಿ, ಇಂದು, ಶನಿವಾರ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಹೊಸ ಪರಿಷ್ಕೃತ ಪಠ್ಯಪುಸ್ತಕವನ್ನು ಹರಿದು ಹಾಕಿದರು.
ಕುವೆಂಪು ಪಠ್ಯದಲ್ಲಿನ ಲೋಪ ವಿರೋಧಿಸಿ ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪಾಲ್ಗೊಂಡಿದ್ದು ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ. ಮಾಜಿ ಪ್ರಧಾನಿ ದೇವೆಗೌಡ ಸಹ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಕೂಡಲೇ ಬಂಧಿಸಬೇಕು. ಎಂದು ಒತ್ತಾಯಿಸಿ ಕನ್ನಡ ಸಂಘಟನೆಗಳು, ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ನಗರದ ಸಂಗೋಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್ ತನಕ ರ್ಯಾಲಿ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶವನ್ನ ಹೊರ ಹಾಕಿದರು. ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯಲು ಸರ್ಕಾರಕ್ಕೆ 10 ದಿನಗಳ ಗಡುವು ಕೊಡುವುದಾಗಿ ಪ್ರತಿಭಟನಾಕಾರರು ಸರ್ಕಾರಕವನ್ನು ಎಚ್ಚರಿಸಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ದೇಶದ್ರೋಹ ಹಾಗೂ ನಾಡದ್ರೋಹದ ಕಾನೂನಿನ ಅಡಿ ದೂರು ದಾಖಲಿಸಿ ಬಂಧಿಸಬೇಕು‌ ಹಾಗೂ ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆ ನೀಡಬೇಕು ಎಂದು ಹಕ್ಕೊತ್ತಾಯ ಮಾಡಲಾಯಿತು.
ಕುವೆಂಪು ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಈ ಹಕ್ಕೊತ್ತಾಯ ಮಂಡಿಸುವ ಮೂಲಕ ರಾಜ್ಯ ಸರಕಾರಕ್ಕೆ ಒತ್ತಾಯ ಮಾಡಲಾಯಿತು. ಕುವೆಂಪು ಹೋರಾಟ ಸಮಿತಿಯ ಅಧ್ಯಕ್ಷರಾದ ಜಿ.ಬಿ ಪಾಟೀಲ್ ಹಕ್ಕೋತ್ತಾಯ ಮಂಡಿಸಿದರು.

ಓದಿರಿ :-   ಮಗು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ನಾನು ನಿಮ್ಮ ಜೊತೆ ನಾವಿದ್ದೇವೆ ಎಂದು ಹೇಳಲು ನಾನಿಲ್ಲಿಗೆ ಬಂದಿದ್ದೇನೆ. ನಾನು ಡಿ.ಕೆ ಶಿವಕುಮಾರ ಆಗಿ‌ ಇಲ್ಲಿಗೆ ಬಂದಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷದ ಅಧ್ಯಕ್ಷನಾಗಿ ಇಲ್ಲಿಗೆ ಬಂದಿದ್ದೇನೆ. ನಮ್ಮ‌ ಕಾಂಗ್ರೆಸ್‌ ಪಕ್ಷ ನಿಮ್ಮ ಹೋರಾಟಕ್ಕೆ ಸದಾ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದರು.
ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪುಸ್ತಕ ಅವರ ಸ್ವತ್ತಲ್ಲ. ಅದು ರಾಜ್ಯದ ಸ್ವತ್ತಾಗಿದೆ. ಬಿಜೆಪಿ ಸರ್ಕಾರದವರು ಪಠ್ಯ ಬದಲಿಸಿದರೆ ಹನ್ನೆರಡು ತಿಂಗಳ ನಂತರ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಹಳೆಯ ಪಠ್ಯ ಪುಸ್ತಕವನ್ನೇ ನೀಡಬೇಕು. ಎಲ್ಲ ಧರ್ಮ, ಜಾತಿಗಳನ್ನ‌ ಗೌರವಿಸಬೇಕು. ನಮಗೆ ಅಧಿಕಾರ, ರಾಜಕಾರಣಕ್ಕಿಂತ ಈ ನಾಡಿನ ಸಂಸ್ಕೃತಿ ಬಹಳ ಮುಖ್ಯ. ಅದಕ್ಕೆ ಈ ಹೋರಾಟಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದರು.ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿದಂತೆ ಹಕ್ಕೊತ್ತಾಯದ ನಿರ್ಣಯದ ಪ್ರತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವೀಕರಿಸಬೇಕು ಎಂಬ ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಬೇಡಿಕೆಗೆ ಸರ್ಕಾರ ಸ್ಪಂದನೆ ನೀಡಲಿಲ್ಲ. ಸರ್ಕಾರದಿಂದ ಯಾರೂ ಸ್ಥಳಕ್ಕೆ ಮಾಹಿತಿ ನೀಡಲಾಯಿತು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ದತ್ತಪೀಠದಲ್ಲಿ ಪೂಜೆಗೆ ಹಿಂದೂ-ಮುಸ್ಲಿಮರಿಗೆ ಅವಕಾಶ: ಸಂಪುಟ ಉಪಸಮಿತಿ ವರದಿ ಶಿಫಾರಸಿಗೆ ಸಂಪುಟ ಸಭೆ ಒಪ್ಪಿಗೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ