ಶಾಲೆ ಬಿಟ್ಟು 30 ವರ್ಷದ ನಂತರ ದ್ವಿತೀಯ ಪಿಯು ಬರೆದು ಫಸ್ಟ್‌ ಕ್ಲಾಸ್‌ನಲ್ಲಿ ತೇರ್ಗಡೆಯಾದ ಮಾಜಿ ಸಚಿವ ಸಾ. ರಾ. ಮಹೇಶ ಪತ್ನಿ!

posted in: ರಾಜ್ಯ | 0

ಮೈಸೂರು: ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ ಅವರ ಪತ್ನಿ ಅನಿತಾ ಮಹೇಶ ಅವರು 30 ವರ್ಷಗಳ ನಂತರ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಈಗ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ಕಲಾ ವಿಭಾಗದಲ್ಲಿ 418 ಅಂಕಗಳನ್ನು ಪಡೆದು ಅವರು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಅನಿತಾ ಮಹೇಶ್‌ ಅವರು 1993ರಲ್ಲಿ ಎಸ್ ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ನಂತರ ಮುಂದಿನ ವಿದ್ಯಾಭ್ಯಾಸ ಮುಂದುವರಿಸಿರಲಿಲ್ಲ. ಈಗ 30 ವರ್ಷಗಳ ನಂತರ ದ್ವಿತೀಯ ಪಿಯು ಪರೀಕ್ಷೆ ಬರೆದ ಅನಿತಾ ಮಹೇಶ ಕಲಾ ವಿಭಾಗದಲ್ಲಿ 600ಕ್ಕೆ 418 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಸಾ.ರಾ.ಮಹೇಶ ದಂಪತಿಗೆ ಇಬ್ಬರು ಪುತ್ರರು. ಹಿರಿಯ ಪುತ್ರ ಧನುಷ್ ಬೆಂಗಳೂರಿನ ವೈದ್ಯಕೀಯ ಸಂಸ್ಥೆಯ ಕಾಲೇಜಿನಲ್ಲಿ ಎಂಡಿ ಮಾಡುತ್ತಿದ್ದಾರೆ. ಕಿರಿಯ ಪುತ್ರ ಜಯಂತ್ ಉದ್ಯಮಿಯಾಗಿ ತಂದೆಗೆ ರಾಜಕೀಯ ನೆರವು ನೀಡುತ್ತಿದ್ದಾರೆ.

 

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ಓದಿರಿ :-   13 ವರ್ಷದ ಮಂಗಳೂರಿನ ಬಾಲಕನ ‘ಕೋಮು ದಾಳಿ’ ಎಂಬ ಕಟ್ಟು ಕಥೆ
advertisement

ನಿಮ್ಮ ಕಾಮೆಂಟ್ ಬರೆಯಿರಿ