ಕುಪ್ವಾರ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬಾತ ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನೊಂದಿಗೆ ಸಂಬಂಧ ಹೊಂದಿರುವ ಪಾಕಿಸ್ತಾನಿ ಎಂದು ಹೇಳಲಾಗಿದೆ. ಎರಡನೆಯವನ ಗುರುತು ಪತ್ತೆಹಚ್ಚಲಾಗುತ್ತಿದೆ ಎಂ ಪೊಲೀಸರು ಹೇಳಿದ್ದಾರೆ.ಅಲ್ಲದೆ, ಕುಲ್ಗಾಮ್ ಜಿಲ್ಲೆಯಲ್ಲಿ ಮತ್ತೊಂದು ಎನ್‌ಕೌಂಟರ್‌ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಭಯೋತ್ಪಾದಕ ಶೋಕೆಟ್ ಅಹ್ಮದ್ ಶೇಖ್‌ನ ಮಾರ್ಗದರ್ಶನದಲ್ಲಿ ಉತ್ತರ ಕಾಶ್ಮೀರದ ಲೋಲಾಬ್ ಪ್ರದೇಶದಲ್ಲಿ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಕುಪ್ವಾರದಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಭಯೋತ್ಪಾದಕರ ಅಡಗುತಾಣಗಳ ಹುಡುಕಾಟದ ಸಮಯದಲ್ಲಿ, ಅಡಗಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದಾಗ ಪಡೆಗಳು ಪ್ರತಿಯಾಗಿ ಗುಂಡು ಹಾರಿಸಿವೆ. ಈ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಕುಲ್ಗಾಮ್‌ನಲ್ಲಿ ಎನ್‌ಕೌಂಟರ್: ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ದಮ್ಹಾಲ್ ಹಂಜಿ ಪೋರಾ ಪ್ರದೇಶದಲ್ಲಿ ಮತ್ತೊಂದು ಎನ್‌ಕೌಂಟರ್ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಎರಡೂ ಕಡೆಯಿಂದ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.

ಪ್ರಮುಖ ಸುದ್ದಿ :-   ವೀಡಿಯೊ..| ಅಯೋಧ್ಯೆಯಲ್ಲಿ ರಾಮನವಮಿ ದಿನ ಬಾಲರಾಮನ ಹಣೆಗೆ ʼಸೂರ್ಯ ರಶ್ಮಿಯ ತಿಲಕ ʼ ; ಅದ್ಭುತ ದೃಶ್ಯ ಕಣ್ತುಂಬಿಕೊಂಡ ಭಕ್ತ ಸಾಗರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement