ಬೆಳಗಾವಿ ಗುಂಪು ಗಲಾಟೆ ಪ್ರಕರಣ.. 26 ಆರೋಪಿಗಳು ಪೊಲೀಸ್​ ವಶಕ್ಕೆ

posted in: ರಾಜ್ಯ | 0

ಬೆಳಗಾವಿ: ಬೆಳಗಾವಿ ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನ ಜಾಗದ ವಿಚಾರಕ್ಕೆ ನಡೆದ ಕೊಲೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಮಾಹಿತಿ ನೀಡಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಕೊಲೆ ಪ್ರಕರಣದಲ್ಲಿ 7 ಜನರನ್ನು ಮತ್ತು ದೊಂಬಿ, ಗಲಾಟೆ ನಡೆಸಿದ್ದ 19 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಗ್ರಾಮದಲ್ಲಿ ಬಂದೋಬಸ್ತ್ ಮುಂದುವರೆದಿದೆ. ಪರಿಸ್ಥಿತಿ ಶಾಂತವಾಗಿದೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ದೊಂಬಿ ಗಲಾಟೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.ಮೊದಲು ವಾಹನ ಪಾರ್ಕಿಂಗ್ ವಿಚಾರಕ್ಕೆ ಗಲಾಟೆಯಾಗಿದೆ. ಇದಕ್ಕೂ ಮೊದಲು ದೇವಸ್ಥಾನ ಜಾಗ ಒತ್ತುವರಿ ವಿಚಾರಕ್ಕೆ ವೈಷಮ್ಯವಿದ್ದ ಮಾಹಿತಿ ಇದೆ. ತನಿಖೆ ಬಳಿಕ ಆರೋಪಿಗಳ ವಿವರ ನೀಡಲಾಗುವುದು ಎಂದು ತಿಳಿಸಿದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ದತ್ತಪೀಠದಲ್ಲಿ ಪೂಜೆಗೆ ಹಿಂದೂ-ಮುಸ್ಲಿಮರಿಗೆ ಅವಕಾಶ: ಸಂಪುಟ ಉಪಸಮಿತಿ ವರದಿ ಶಿಫಾರಸಿಗೆ ಸಂಪುಟ ಸಭೆ ಒಪ್ಪಿಗೆ
advertisement

ನಿಮ್ಮ ಕಾಮೆಂಟ್ ಬರೆಯಿರಿ