ಬೆಳಗಾವಿ: ದೇವಸ್ಥಾನದ ಜಾಗದ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಉಂಟಾದ ಘರ್ಷಣೆಯಲ್ಲಿ ಓರ್ವನ ಹತ್ಯೆಯಾಗಿದೆ. ಇಡೀ ಗ್ರಾಮಕ್ಕೆ ಬೆಂಕಿ ಇಡಲಾಗಿದೆ. ಪರಿಣಾಮ ಎರಡು ಕಾರು, ಒಂದು ವಾಟರ್ ಟ್ಯಾಂಕ್ ಲಾರಿ ಮತ್ತು ಒಂದು ಟ್ರಾಕ್ಟರ್ ಬೆಂಕಿಗೆ ಆಹುತಿಯಾಗಿದೆ.
ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಅನೇಕ ವರ್ಷಗಳಿಂದ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇದ್ದ ಜಗಳ ಶನಿವಾರ ರಾತ್ರಿ ಕಾರು ಪಾರ್ಕಿಂಗ್ ಮಾಡುವ ವಿಷಯಕ್ಕೆ ಗಲಾಟೆಯಾಗಿ ವ್ಯಕ್ತಿ ಕೊಲೆಯಲ್ಲಿ ಅಂತ್ಯವಾಗಿದೆ. ರೊಚ್ಚಿಗೆದ್ದ ಗ್ರಾಮಸ್ಥರು ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಗಲಾಟೆಯಲ್ಲಿ ಕೊಲೆಯಾದ ವ್ಯಕ್ತಿಯನ್ನು ಸತೀಶ ಪಾಟೀಲ ಎಂದು ಗುರುತಿಸಲಾಗಿದೆ. ದೇವಸ್ಥಾನಕ್ಕೆ ಸೇರಿದ ಜಾಗದ ವ್ಯಾಜ್ಯವನ್ನು ಬಗೆಹರಿಸಲು ಎರಡು ಗುಂಪಿನವರು ಸಭೆ ಸೇರಿದ್ದರು. ಆ ಸಮಯದಲ್ಲಿ ಪಾರ್ಕಿಂಗ್ ಕುರಿತ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಗಲಾಟೆಯೇ ನಡೆದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ