ಮೈಸೂರು: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಅಳವಡಿಸಿದ್ದ ಹಿಂದಿ ಫ್ಲೆಕ್ಸ್‌ಗೆ ಮಸಿ ಬಳಿದ ಕರವೇ ಕಾರ್ಯಕರ್ತರು

posted in: ರಾಜ್ಯ | 0

ಮೈಸೂರು : ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿ ಆಗಮನಕ್ಕೆ ಹಿಂದಿ ಹೆಸರಿನಲ್ಲಿ ಅಳವಡಿಸಲಾಗಿರುವ ಫ್ಲೆಕ್ಸ್‌ ಗಳಿಗೆ ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು, ಭಾನುವಾರ ಸಂಜೆ 5 ಗಂಟೆಯಲ್ಲಿ ಮಸಿ ಬಳಿದಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಪ್ರಧಾನಿ ನರೇಂದ್ರ ಮೋದಿ ಮೈಸೂರು ಭೇಟಿ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ಸಚಿವ ಮುನಿರತ್ನ ನಾಯ್ಡು ಮತ್ತು ಬೆಂಬಲಿಗರು ಹಿಂದಿ ಭಾಷೆಯ ಫ್ಲೆಕ್ಸ್ ಗಳನ್ನು ಅಳವಡಿಸಿದ್ದರು.
ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಕರವೇ ಯುವ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ್ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಫ್ಲೆಕ್ಸ್ ಗಳಿಗೆ ಮಸಿ ಬಳಿದರು. ಪೊಲೀಸರು ತಡೆದರೂ ಸಹ ಫ್ಲೆಕ್ಸ್ ಗಳಿಗೆ ಮಸಿ ಬಳಿಯಲಾಯಿತು.
ಕರ್ನಾಟಕದಲ್ಲಿ ಹಿಂದಿಹೇರಿಕೆ ಸಹಿಸುವುದಿಲ್ಲ ಎಂಬ ಎಚ್ಚರಿಕೆ ನೀಡಿದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ದೇವೇಗೌಡರ ಕುರಿತು ಆಕ್ಷೇಪಾರ್ಹ ಹೇಳಿಕೆ: ಕ್ಷಮೆಯಾಚಿಸಿದ ಕೆ.ಎನ್‌.ರಾಜಣ್ಣ
advertisement

ನಿಮ್ಮ ಕಾಮೆಂಟ್ ಬರೆಯಿರಿ