ಪ್ರಧಾನಿ ಮೋದಿ ನಾಳೆಯಿಂದ ಎರಡು ದಿನಗಳ ರಾಜ್ಯ ಪ್ರವಾಸ: ಕಾರ್ಯಕ್ರಮಗಳ ವಿವರ ಇಲ್ಲಿದೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜೂನ್ 20 ಮತ್ತು 21ರಂದು ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಮಧ್ಯಾಹ್ನ (ಜೂನ್ 20) 12:30ಕ್ಕೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮಿದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1:45 ಕ್ಕೆ ಪ್ರಧಾನಿಯವರು (ಬೇಸ್) ಕ್ಯಾಂಪಸ್ ಗೆ ತೆರಳಿ ಡಾ:ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ ಮಾಡಲಿದ್ದಾರೆ ಹಾಗೂ ಡಾ:ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಸಹ ಮಾಡುವರು. ಅಲ್ಲದೆ, ಮೇಲ್ದರ್ಜೆಗೇರಿಸಿದ 150 ಐಟಿಐಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 2:45 ಕ್ಕೆ ಬೆಂಗಳೂರಿನ ಕೊಮ್ಮಘಟ್ಟದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ ಎಂದು ಮಾಹಿತಿ ನೀಡಿದರು.

ನಂತರ ಮೈಸೂರಿಗೆ ತೆರಳುವ ಅಂದು ಸಂಜೆ 5:30 ಕ್ಕೆ ಮೈಸೂರಿನ ಮಹಾರಾಜ ಮೈದಾನಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಳ್ಳಲಿದ್ದು, ನಂತರ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ರಾತ್ರಿ 7 ಗಂಟೆಗೆ ಶ್ರೀ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ರಾತ್ರಿ 7:50 ಕ್ಕೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಮಂಗಳವಾರ, ಜೂನ್ 21 ರಂದು ಬೆಳಿಗ್ಗೆ 6:30 ಕ್ಕೆ ಪ್ರಧಾನಿ ಮೋದಿಯವರು ಮೈಸೂರು ಅರಮನೆಯ ಮೈದಾನದಲ್ಲಿ ಅಂತಾರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಭಾಗವಹಿಸಿ ಯೋಗಪಟುಗಳೊಂದಿ ಯೋಗ ಮಾಡಲಿದ್ದಾರೆ. ಬೆಳಿಗ್ಗೆ 8:10 ಕ್ಕೆ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದು, ನಂತರ ಬೆಳಿಗ್ಗೆ 9:20 ಕ್ಕೆ ಮೈಸೂರು ಅರಮನೆ ಆವರಣದಿಂದ ನಿರ್ಗಮಿಸಿ ಬೆಳಿಗ್ಗೆ 9:45ಕ್ಕೆ ಮೈಸೂರಿನ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement